Belagavi

ಬೆಳಗಾವಿ: ಮರಾಠಾ ಮಂಡಳ ಪಾಲಿಟೆಕ್ನಿಕ್‌ನಲ್ಲಿ ಯಶಸ್ವಿಯಾಗಿ ಜರುಗಿದ ಹೊಸ ಮತದಾರರ ನೊಂದಣಿ ಅಭಿಯಾನ

Share

ಪ್ರಜಾಪ್ರಭುತ್ವದ ಒಳಿತಿಗಾಗಿ ಯುವ ಮತದಾರರ ಪಾಲ್ಗೊಳ್ಳುವಿಕೆ ಅತ್ಯಾವಶ್ಯಕ. ಬೆಳಗಾವಿಯ ಮರಾಠಾ ಮಂಡಳ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ನಡೆದ ನೂತನ ಮತದಾರರ ನೊಂದಣಿ ಮತ್ತು ಜಾಗೃತಿ ಕಾರ್ಯಕ್ರಮದಲ್ಲಿ ನೂರಾರು ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡು ಡಿಜಿಟಲ್ ಮಾಧ್ಯಮದ ಮೂಲಕ ಮತದಾರರ ಗುರುತಿನ ಚೀಟಿಗೆ ಹೆಸರು ನೋಂದಾಯಿಸಿಕೊಂಡಿದ್ದಾರೆ.

ಬೆಳಗಾವಿ ನಗರ ಮಹಾನಗರ ಪಾಲಿಕೆ ಹಾಗೂ ಚುನಾವಣಾ ಆಯೋಗದ ಸಹಯೋಗದೊಂದಿಗೆ ಸೆಪ್ಟೆಂಬರ್ 22 ರಂದು ಮರಾಠಾ ಮಂಡಳ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಹೊಸ ಮತದಾರರ ನಂದಣಿ ಮತ್ತು ಜಾಗೃತಿ ಕಾರ್ಯಕ್ರಮವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಯಿತು. ಈ ವಿಶೇಷ ಅಭಿಯಾನದಲ್ಲಿ 200ಕ್ಕೂ ಹೆಚ್ಚು ವಿದ್ಯಾರ್ಥಿಗಳು ಸಕ್ರಿಯವಾಗಿ ಭಾಗವಹಿಸಿ ಆನ್‌ಲೈನ್ ಮೂಲಕ ತಮ್ಮ ವೋಟರ್ ಐಡಿಗೆ ಹೆಸರು ನೋಂದಾಯಿಸಿಕೊಂಡರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಚಾರ್ಯರಾದ ಆರ್.ಎಸ್. ಸೂರ್ಯವಂಶಿ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು ದೇಶದ ಬಲಿಷ್ಠ ನಿರ್ಮಾಣಕ್ಕೆ ಯುವ ಮತದಾನದ ಮಹತ್ವದ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಎನ್.ಎಸ್.ಎಸ್. ಸಂಯೋಜಕರಾದ ಜಿ.ಕೆ. ಶಿವಯೋಗಿಮಠ ಹಾಗೂ ವಿದ್ಯಾರ್ಥಿ ಕಾರ್ಯದರ್ಶಿಗಳ ನೇತೃತ್ವದಲ್ಲಿ ಈ ಕಾರ್ಯಕ್ರಮವು ಯಶಸ್ವಿಯಾಗಿ ನೆರವೇರಿತು.

Tags:

error: Content is protected !!