Banglore

ಶಾಸಕರೊಬ್ಬರಿಂದ ಬೆಳಗಾವಿಯಲ್ಲಿ ಅಲ್ಪಸಂಖ್ಯಾತರ ಮತಗಳನ್ನು ಕಡಿತಗೊಳಿಸಲು ಹುನ್ನಾರ ; ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ

Share

 

ಬೆಳಗಾವಿಯಲ್ಲಿ ಅಲ್ಪಸಂಖ್ಯಾತರ ಮತಗಳನ್ನು ವ್ಯವಸ್ಥಿತವಾಗಿ ಕೈಬಿಡಲು ಷಡ್ಯಂತ್ರ ನಡೆಯುತ್ತಿದೆ ಎಂದು ಕೆಪಿಸಿಸಿ ಮುಖಂಡ ಬಿ.ಕೆ. ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದು, ಬಿಜೆಪಿ ಹಾಗೂ ಆರ್‌ಎಸ್‌ಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಇಂದು ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್, ಕೇಂದ್ರ ಸರ್ಕಾರದ ವಿರುದ್ಧ ಮತ್ತು ಚುನಾವಣಾ ಆಯೋಗದ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದರು. ಬೆಳಗಾವಿಯಿಂದ ಶಾಸಕರೊಬ್ಬರು ಚುನಾವಣಾ ಆಯೋಗಕ್ಕೆ ಪತ್ರ ಬರೆದು, 2,500ಕ್ಕೂ ಹೆಚ್ಚು ಅಲ್ಪಸಂಖ್ಯಾತ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಡಿಲೀಟ್ ಮಾಡಲು ಕೋರಿದ್ದಾರೆ ಎಂದು ಆರೋಪಿಸಿದರು. ಆದರೆ, ಮುಖ್ಯ ಚುನಾವಣಾ ಆಯೋಗವು ಇಂತಹ ಹೆಸರುಗಳನ್ನು ತೆಗೆದುಹಾಕಲು ಬರುವುದಿಲ್ಲ ಎಂದು ಸ್ಪಷ್ಟಪಡಿಸಿದೆ ಎಂದು ಅವರು ವಿವರಿಸಿದರು. ಬೈಟ್
ಮುಂದುವರಿದು ಮಾತನಾಡಿದ ಅವರು, ಕೇವಲ ಒಂದು ಬೂತ್‌ನಲ್ಲೇ ಸುಮಾರು 50 ಜನ ಮತಗಳನ್ನು ಡಿಲೀಟ್ ಮಾಡಲು ಬೋಗಸ್ ಫಾರಂಗಳನ್ನು ನೀಡಲಾಗಿದ್ದು, ಇದರ ಹಿಂದೆ ಕಾನೂನುಬಾಹಿರ ಚಟುವಟಿಕೆ ನಡೆಯುತ್ತಿದೆ ಎಂದು ದೂರಿದರು. ಶಾಸಕ ಅಭಯ್ ಪಾಟೀಲ್ ಹೆಸರಿನಲ್ಲೂ ಸುಮಾರು 7,000 ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲು ಫಾರಂಗಳನ್ನು ಸಲ್ಲಿಸಲಾಗಿದೆ ಎಂದು ದಾಖಲೆಗಳನ್ನು ತೋರಿಸಿ ಆಕ್ರೋಶ ವ್ಯಕ್ತಪಡಿಸಿದರು. ದೇಶದಲ್ಲಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ನೇತೃತ್ವದಲ್ಲಿ ಕೋಟಿಗಟ್ಟಲೆ ಮತಗಳನ್ನು ಪಟ್ಟಿಯಿಂದ ತೆಗೆದುಹಾಕುವ ಹುನ್ನಾರ ನಡೆಯುತ್ತಿದ್ದು, ಇದು ಬಿಜೆಪಿ ಹಾಗೂ ಆರ್‌ಎಸ್‌ಎಸ್‌ನ ನಿಜವಾದ ಸ್ವರೂಪವಾಗಿದೆ ಎಂದು ಕಿಡಿಕಾರಿದರು. ಬೈಟ್

Tags:

error: Content is protected !!