Chikkodi

ಉಪಲೋಕಾಯುಕ್ತ ಬಿ.ವೀರಪ್ಪ ದಿಢೀರ್ ಭೇಟಿ: ಹಿರೇಕೋಡಿ ಗ್ರಾಮ ಪಂಚಾಯತಿಯಲ್ಲಿ ದಾಖಲೆ ಪರಿಶೀಲನೆ, ದೂರುಗಳ ಸುರಿಮಳೆ

Share

ತಾಲೂಕಿನ ಹಿರೇಕೋಡಿ ಗ್ರಾಮ ಪಂಚಾಯತಿಗೆ ಶುಕ್ರವಾರ ಬೆಳಂಬೆಳಗ್ಗೆ ಉಪಲೋಕಾಯುಕ್ತ ಬಿ.ವೀರಪ್ಪ ಅವರು ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಬೆಳಗ್ಗೆಯೇ ಪಂಚಾಯತಿ ಕಚೇರಿಗೆ ಆಗಮಿಸಿದ ಉಪಲೋಕಾಯುಕ್ತರು, ಕಚೇರಿಯ ಪ್ರಮುಖ ಹಜಾರು ಪುಸ್ತಕ, ಯೋಜನೆಗಳ ಅನುದಾನ ವೆಚ್ಚ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದ ಪ್ರಮುಖ ದಾಖಲೆಗಳನ್ನು ಕೂಲಂಕುಷವಾಗಿ ಪರಿಶೀಲಿಸಿದರು. ಅಧಿಕಾರಿಗಳ ಕಾರ್ಯವೈಖರಿ ಮತ್ತು ಹಾಜರಾತಿ ಕುರಿತು ತೀವ್ರ ವಿಚಾರಣೆ ನಡೆಸಿದರು.

ಉಪಲೋಕಾಯುಕ್ತರು ಭೇಟಿ ನೀಡಿದ ವಿಷಯ ತಿಳಿಯುತ್ತಿದ್ದಂತೆಯೇ ಗ್ರಾಮ ಪಂಚಾಯತಿ ಕಚೇರಿ ಆವರಣದಲ್ಲಿ ನೂರಾರು ಗ್ರಾಮಸ್ಥರು ಜಮಾಯಿಸಿದರು. ಕುಡಿಯುವ ನೀರು, ರಸ್ತೆ, ಚರಂಡಿ ಸೇರಿದಂತೆ ಮೂಲಭೂತ ಸೌಕರ್ಯಗಳ ಕೊರತೆ ಹಾಗೂ ಸಾರ್ವಜನಿಕ ಕೆಲಸಗಳಿಗೆ ಸಿಬ್ಬಂದಿ ಸ್ಪಂದಿಸುತ್ತಿಲ್ಲ ಎಂದು ಸಾರ್ವಜನಿಕರು ಉಪಲೋಕಾಯುಕ್ತರ ಎದುರು ಸಾಲು ಸಾಲು ದೂರುಗಳನ್ನು ಸಲ್ಲಿಸಿದರು.

ಸಾರ್ವಜನಿಕರ ದೂರುಗಳನ್ನು ಸ್ವೀಕರಿಸಿದ ಉಪಲೋಕಾಯುಕ್ತ ಬಿ.ವೀರಪ್ಪ ಅವರು, ಸಾರ್ವಜನಿಕರ ಕೆಲಸ ಕಾರ್ಯಗಳಲ್ಲಿ ನಿರ್ಲಕ್ಷ್ಯ ವಹಿಸುವ ಹಾಗೂ ಭ್ರಷ್ಟಾಚಾರದಲ್ಲಿ ತೊಡಗುವ ಅಧಿಕಾರಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ಲೋಕಾಯುಕ್ತ ಸಿಬ್ಬಂದಿ, ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ (PDO) ಹಾಗೂ ಸ್ಥಳೀಯ ಪ್ರಮುಖರು ಉಪಸ್ಥಿತರಿದ್ದರು.

Tags:

error: Content is protected !!