ಜಿಲ್ಲಾ ಶಿಕ್ಷಣ ಇಲಾಖೆ ಮತ್ತು ಅಂಜುಮನ್ ಪದವಿ ಪೂರ್ವ ಕಾಲೇಜು,ಬೆಳಗಾವಿ ಇವರ ಸಂಯುಕ್ತ ಆಶ್ರಯದಲ್ಲಿ ನಡೆದ 2026-27ನೇ ಸಾಲಿನ ಜಿಲ್ಲಾ ಮಟ್ಟದ ಕ್ರೀಡಾಕೂಟ*ದಲ್ಲಿ KLE Society’s M S Hosmani ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ *ಕು. ಅಂಜಲಿ ಎನ್. ಗೌರವ ರವರು ಟೈಕ್ವಾಂಡೋ -56 ಕೆ.ಜಿ ವಿಭಾಗದಲ್ಲಿ ಪ್ರಥಮ ಸ್ಥಾನ ಪಡೆದು ಬಂಗಾರ ಪದಕ ಗೆದ್ದು ಕಾಲೇಜಿಗೆ ಕೀರ್ತಿ ತಂದಿದ್ದಾರೆ.

ಅಂಜಲಿ ಅವರು ಕಾಲೇಜಿನ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಅವರ ಈ ಸಾಧನೆಗೆ ಕಾಲೇಜಿನ ಪ್ರಾಂಶುಪಾಲರು ಶ್ರೀ ವಿಜಯ್ ಕಲ್ಮಠ, ದೈಹಿಕ ಶಿಕ್ಷಕ ಶ್ರೀ ಕೆ ವಿ ಪಾಟೀಲ, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಅಭಿನಂದನೆ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ರಾಜ್ಯ ಮಟ್ಟದಲ್ಲಿ ಇನ್ನೂ ಉತ್ತಮ ಸಾಧನೆ ಮಾಡುವಂತೆ ಶುಭ ಹಾರೈಸಿದ್ದಾರೆ.
ಅಲ್ತಾಫ್ ಎಂ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ
