Khanapur

ಬೆಳಗಾವಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳ ಎರಡು ದಿನಗಳ ನಾಯಕತ್ವ ಕಾರ್ಯಾಗಾರ ಘಟಪ್ರಭಾನಲ್ಲಿ:- ಜಿಲ್ಲಾ ಮಹಿಳಾ ಗ್ರಾಮೀಣ ಘಟಕದ ಅಧ್ಯಕ್ಷೆ ಅಶ್ವಿನಿ ಬೆಳವಡಿ

Share

ಬೆಳಗಾವಿ ಜಿಲ್ಲಾ ಮಹಿಳಾ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳ ಎರಡು ದಿನಗಳ ನಾಯಕತ್ವ ಕಾರ್ಯಾಗಾರವನ್ನು ದಿನಾಂಕ,26-27 ರಂದು ಬೆಳ್ಳಗೆ 9 ಗಂಟೆಗೆ ಸೇವಾದಳ, ಘಟಪ್ರಭಾನಲ್ಲಿ ಹಮ್ಮಿಕೊಂಡಿದ್ದು

ಈ ಕಾರ್ಯಾಗಾರವನ್ನು ಜಿಲ್ಲಾ ಉಸ್ತುವಾರಿ ಮತ್ತು ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ ಜಾರಕಿಹೊಳಿ ಉದ್ಘಾಟಿಸುವವರು

ಈ ಕಾರ್ಯಾಗಾರದ ಅಧ್ಯಕ್ಷತೆಯನ್ನು ಮಹಿಳಾ ಕಾಂಗ್ರೆಸ್ ರಾಜ್ಯಾಧ್ಯಕ್ಷೆ ಸೌಮ್ಯ ರೆಡ್ಡಿಯವರು ವಹಿಸಲಿದ್ದು ಮುಖ್ಯ ಅತಿಥಿಗಳಾಗಿ ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ, ಸಂಸದೆ ಪ್ರಿಯಾಂಕಾ ಜಾರಕಿಹೊಳಿ, ಉಪ್ಪಾರ ಅಭಿವೃದ್ಧಿ ನಿಗಮದ ಅಧ್ಯಕ್ಷ ಭರಮಣ್ಣ ಉಪ್ಪಾರ ಮತ್ತು ಬೆಳಗಾವಿ ಜಿಲ್ಲಾ ಗ್ರಾಮೀಣ ಘಟಕದ ಅಧ್ಯಕ್ಷ ಬಸವರಾಜ ಶೇಗಾವಿ ಸೇರಿದಂತೆ ಇನ್ನಿತರ ಬೆಳಗಾವಿ ಜಿಲ್ಲೆಯ ಶಾಸಕರು ಮತ್ತು ಕಾಂಗ್ರೆಸ್ ಮುಖಂಡರು ಆಗಮಿಸುವವರು ಎಂದು ಆಯೋಜಕರು ಮತ್ತು ಬೆಳಗಾವಿ ಜಿಲ್ಲಾ ಗ್ರಾಮೀಣ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಶ್ವಿನಿ ಬೆಳವಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಲ್ತಾಫ್ ಎಂ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ

Tags:

error: Content is protected !!