Vijaypura

SIR ಹೆಸರಲ್ಲಿ ಮತದಾರರ ಹೆಸರು ಡಿಲೀಟ್..! 8 ಮಂದಿಯ ಕೈವಾಡದ ಅವರ ಕುರಿತು ಮಾಹಿತಿ ಇದೆ; ಸಚಿವ ಎಂ.ಬಿ. ಪಾಟೀಲ

Share

SIR ಹೆಸರಿನಲ್ಲಿ ಮತದಾರರ ಹೆಸರುಗಳನ್ನು ಅಳಿಸುವ ಕೆಲಸ ನಡೆಯುತ್ತಿದೆ ಎಂದು ಸಚಿವ ಎಂ.ಬಿ. ಪಾಟೀಲ ಗಂಭೀರ ಆರೋಪ ಮಾಡಿದ್ದಾರೆ. ತಮ್ಮ ಕ್ಷೇತ್ರದಲ್ಲೇ 1,372 ಮತದಾರರ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ. ಇದರ ಹಿಂದೆ ಯಾರಿದ್ದಾರೆ, ಯಾವ ಉದ್ದೇಶದಿಂದ ಹೆಸರುಗಳನ್ನು ಅಳಿಸಲಾಗಿದೆ ಎಂಬುದು ನನಗೆ ಗೊತ್ತಿದೆ. ಈ ಬಗ್ಗೆ ಜಿಲ್ಲಾಧಿಕಾರಿಗಳೊಂದಿಗೆ ನಾಳೆ ಸಭೆ ನಡೆಸುವುದಾಗಿ ಸಚಿವರು ತಿಳಿಸಿದ್ದಾರೆ. SIR ಪ್ರಕ್ರಿಯೆ ವಿಚಾರವಾಗಿ ವಿಜಯಪುರದಲ್ಲಿ ರಾಜಕೀಯ ಆರೋಪ–ಪ್ರತ್ಯಾರೋಪ ತೀವ್ರಗೊಂಡಿದೆ. ಬಿಜೆಪಿ ಹಾಗೂ ಚುನಾವಣಾ ಆಯೋಗದ ವಿರುದ್ಧ ಸಚಿವ ಎಂ.ಬಿ. ಪಾಟೀಲ ವಾಗ್ದಾಳಿ ನಡೆಸಿದ್ದಾರೆ. SIR ಹೆಸರಿನಲ್ಲಿ ಮುಖ್ಯವಾಗಿ ಮತದಾರರ ಹೆಸರುಗಳನ್ನು ಅಳಿಸಲಾಗುತ್ತಿದೆ ಎಂದು ಆರೋಪಿಸಿರುವ ಸಚಿವರು, ಮುಖ್ಯ ಚುನಾವಣಾಧಿಕಾರಿ ಜ್ಞಾನೇಂದ್ರ ಕುಮಾರ್ ಅವರ ಕಾರ್ಯವೈಖರಿ ಬಗ್ಗೆಯೂ ಪ್ರಶ್ನೆ ಎತ್ತಿದ್ದಾರೆ. ತಮ್ಮ ಕ್ಷೇತ್ರದಲ್ಲಿ ಬರೋಬ್ಬರಿ 1,372 ಮತದಾರರ ಹೆಸರುಗಳನ್ನು ಅಳಿಸಲಾಗಿದೆ ಎಂದು ಹೇಳಿರುವ ಎಂ.ಬಿ. ಪಾಟೀಲ, ಈ ಹೆಸರುಗಳನ್ನು ಯಾರು ಅಳಿಸಿದ್ದಾರೆ ಮತ್ತು ಯಾವ ಉದ್ದೇಶದಿಂದ ಅಳಿಸಲಾಗಿದೆ ಎಂಬುದು ನನಗೆ ಗೊತ್ತಿದೆ ಎಂದಿದ್ದಾರೆ. ಅಷ್ಟೇ ಅಲ್ಲ, ಇದರ ಹಿಂದೆ ಎಂಟು ಮಂದಿ ಇದ್ದಾರೆ. ಅವರ ಬಗ್ಗೆಯೂ ನನಗೆ ಸಂಪೂರ್ಣ ಮಾಹಿತಿ ಇದೆ ಎಂದು ಸಚಿವರು ಆರೋಪಿಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಒಟ್ಟು 18 ಸಾವಿರ ಮತದಾರರ ಹೆಸರುಗಳನ್ನು ಅಳಿಸುವ ಪ್ರಕ್ರಿಯೆ ನಡೆಯುತ್ತಿದೆ ಎಂಬ ಗಂಭೀರ ಆರೋಪವನ್ನೂ ಮಾಡಿದ್ದಾರೆ. ಇನ್ನೂ ಒಂದೂವರೆ ವರ್ಷದಲ್ಲಿ ಕರ್ನಾಟಕ ವಿಧಾನಸಭಾ ಚುನಾವಣೆ ಎದುರಾಗಲಿದೆ. ಹೀಗಾಗಿ SIR ಪ್ರಕ್ರಿಯೆ ಕುರಿತು ಎಚ್ಚರಿಕೆ ಅಗತ್ಯ ಎಂದು ಸಚಿವರು ಹೇಳಿದ್ದಾರೆ. ಈ ಎಲ್ಲಾ ವಿಚಾರಗಳ ಕುರಿತು ಜಿಲ್ಲಾಧಿಕಾರಿಗಳೊಂದಿಗೆ ನಾಳೆ ಸಭೆ ನಡೆಸುವುದಾಗಿ ಎಂ.ಬಿ. ಪಾಟೀಲ ತಿಳಿಸಿದ್ದಾರೆ.

Tags:

error: Content is protected !!