State

ವೀರಶೈವ ಲಿಂಗಾಯತ ಧರ್ಮ ಸಂರಕ್ಷಣೆಗೆ ಒಗ್ಗಟ್ಟಿನ ಮಂತ್ರ ಜಪಿಸಿದ ಸಿಎಂ ಡಿ.ಕೆ. ಶಿವಕುಮಾರ್

Share

ಬೆಂಗಳೂರಿನ ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಧರ್ಮದ ಉಳಿವಿಗಾಗಿ ಒಗ್ಗಟ್ಟಿನ ಮಂತ್ರ ಜಪಿಸಿದ್ದಾರೆ.

ಬೆಂಗಳೂರಿನ ವಿಜಯನಗರದ ಶ್ರೀ ಬಸವೇಶ್ವರ ಸುಜ್ಞಾನ ಮಂಟಪದಲ್ಲಿ ಭಾನುವಾರ ಅದ್ಧೂರಿಯಾಗಿ ಜರುಗಿದ ವೀರಶೈವ ಲಿಂಗಾಯತ ಧರ್ಮ ಸಂರಕ್ಷಣಾ ಸಮ್ಮೇಳನವನ್ನು ಉದ್ಘಾಟಿಸಿ ಮಾತನಾಡಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು, ಸಮಾಜದ ಉಳಿವು ಮತ್ತು ಧರ್ಮದ ಸಂರಕ್ಷಣೆಗಾಗಿ ಎಲ್ಲರೂ ಒಗ್ಗಟ್ಟಾಗಿ ಶ್ರಮಿಸಬೇಕು ಎಂದು ಕರೆ ನೀಡಿದರು. ಈ ಪವಿತ್ರ ಧಾರ್ಮಿಕ ಮಹಾಸಮ್ಮೇಳನದಲ್ಲಿ ಪಂಚಪೀಠಗಳಾದ ರಂಭಾಪುರಿ ಪೀಠದ ಪ್ರಸನ್ನ ರೇಣುಕ ವೀರಸೋಮೇಶ್ವರ ರಾಜದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು, ಉಜ್ಜಯನಿ ಪೀಠದ ಶ್ರೀ ಸಿದ್ದಲಿಂಗರಾಜ ದೇಶಿಕೇಂದ್ರ ಶಿವಾಚಾರ್ಯ ಮಹಾಸ್ವಾಮಿಗಳು, ಹಿಮವತ್ ಕೇದಾರ ಪೀಠದ ಶ್ರೀ ಭೀಮಾಶಂಕರಲಿಂಗ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀಶೈಲ ಪೀಠದ ಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಹಾಗೂ ಕಾಶಿ ಪೀಠದ ಶ್ರೀ ಮಲ್ಲಿಕಾರ್ಜುನ ವಿಶ್ವಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ದಿವ್ಯ ಸಾನ್ನಿಧ್ಯ ವಹಿಸಿದ್ದರು.

ಇವರೊಂದಿಗೆ ಶ್ರೀ ಪ್ರಭು ಸಾರಂಗದೇವ ಶಿವಾಚಾರ್ಯ ಸ್ವಾಮಿಗಳು, ಶ್ರೀ ಗಂಗಾಧರ ಶಿವಾಚಾರ್ಯ ಸ್ವಾಮಿಗಳು, ಡಾ. ಜಯಶಾಂತಲಿಂಗ ಶಿವಾಚಾರ್ಯ ಸ್ವಾಮೀಜಿಗಳು, ಸೊಲ್ಲಾಪುರದ ಶ್ರೀ ಡಾ. ಜಯಸಿದ್ದ ಶಿವಾಚಾರ್ಯ ಸ್ವಾಮಿಗಳು ಮತ್ತು ಶ್ರೀ ವೀರಭದ್ರ ಶಿವಾಚಾರ್ಯ ಸ್ವಾಮಿಗಳು ದಿವ್ಯ ಉಪಸ್ಥಿತಿ ಕರುಣಿಸಿದ್ದರು. ಅಷ್ಟೇ ಅಲ್ಲದೆ, ಸರ್ಕಾರದ ಸಚಿವರಾದ ಈಶ್ವರ ಖಂಡ್ರೆ, ವಿಜಯಾನಂದ ಕಾಶಪ್ಪನವರ್, ಮಾಜಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ವೀಣಾ ಕಾಶಪ್ಪನವರ ಸೇರಿದಂತೆ ಅನೇಕ ಗಣ್ಯರು ಹಾಗೂ ಸಾವಿರಾರು ಭಕ್ತಾದಿಗಳು ಪಾಲ್ಗೊಂಡು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

Tags:

error: Content is protected !!