Belagavi

ಚುನಾವಣಾ ಆಯೋಗದ ಆಯುಕ್ತರ ರಾಜೀನಾಮೆಗೆ ಆಗ್ರಹಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್‌’ನಿಂದ ಉಗ್ರ ಪ್ರತಿಭಟನೆ

Share

ಮತಗಳ್ಳತನಕ್ಕೆ ಸಹಾಯ ಮಾಡಿದ್ದಾರೆಂದು ಆರೋಪಿಸಿ ಭಾರತೀಯ ಚುನಾವಣಾ ಆಯೋಗದ ಅಧ್ಯಕ್ಷ ಜ್ಞಾನೇಂದ್ರ ರಾಜೀನಾಮೆಗೆ ಆಗ್ರಹಿಸಿ ಇಂದು ಬೆಳಗಾವಿಯಲ್ಲಿ ಗ್ರಾಮೀಣ ಮತ್ತು ಜಿಲ್ಲಾ ಕಾಂಗ್ರೆಸ್ಸಿನ ವತಿಯಿಂದ ಉಗ್ರ ಪ್ರತಿಭಟನೆಯನ್ನು ನಡೆಸಲಾಯಿತು.

ಇಂದು ಬೆಳಗಾವಿಯ ಆರ್.ಟಿ.ಓ ಸಂಗೊಳ್ಳಿ ರಾಯಣ್ಣ ವೃತ್ತದ ಬಳಿಯ ಕಾಂಗ್ರೆಸ್ ಭವನದಿಂದ ಆರಂಭಗೊಂಡ ಪ್ರತಿಭಟನಾ ಘೋಷಣೆಗಳನ್ನು ಕೂಗೂತ್ತ ಮೆರವಣಿಗೆಯೂ ಕೋರ್ಟ್ ವೃತ್ತದ ಬಳಿ ಆಗಮಿಸಿತು. ಅಲ್ಲಿ ಭಾರತೀಯ ಚುನಾವಣಾ ಆಯೋಗದ ಆಯುಕ್ತ ಜ್ಞಾನೇಂದ್ರಕುಮಾರ್ ಅವರ ಪ್ರತಿಕೃತಿಯನ್ನು ದಹಿಸಿ ಕಾಂಗ್ರೆಸ್ಸಿಗರು ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಎಂ.ಎಲ್.ಸಿ ಚನ್ನರಾಜ್ ಹಟ್ಟಿಹೊಳಿ ಅವರು ಮಾತನಾಡಿ ದೇಶದ ಚುನಾವಣಾ ಆಯುಕ್ತರಾದ ಜ್ಞಾನೇಶ್ ಕುಮಾರ್ ಅವರ ಕ್ರಮವನ್ನು ಖಂಡಿಸಿದ್ದು, ಕೂಡಲೇ ಅವರು ರಾಜೀನಾಮೆ ನೀಡಿ, ದೇಶದ ಜನರ ಕ್ಷಮೆ ಯಾಚಿಸಬೇಕು. ಎಸ್.ಆರ್. ವಿಚಾರವಾಗಿ 14 ಬಾರಿ ಸಲಹೆ ನೀಡಿದರು ಸಂವಿಧಾನಕ್ಕೆ ವಿರೋಧವಾಗಿ ಪ್ರಜಾಪ್ರಭುತ್ವವನ್ನು ಕಗ್ಗೊಲೆ ಮಾಡಿದ್ದಾರೆ ಎಂದು ಆಕ್ಷೇಪಣೆ ಮಾಡಿದರು. ಅಸ್ಸಾಂ, ಪಶ್ಚಿಮ ಬಂಗಾಳ , ಬಿಹಾರ್ ಮತ್ತು ಮಹಾರಾಷ್ಟ್ರದಲ್ಲಿ ಮರು ಚುನಾವಣೆ ಮತ್ತು ಕರ್ನಾಟಕದಲ್ಲಿ ಮರು ಎಸ್.ಐ.ಆರ್ ಪ್ರಕ್ರಿಯೆ ನಡೆಯಬೇಕೆಂದು ಒತ್ತಾಯಿಸಿದರು.

ಕೆಪಿಸಿಸಿ ಸದಸ್ಯ ಮಲಗೌಡ ಪಾಟೀಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಪ್ರಜಾಪ್ರಭುತ್ವದ ಕಗ್ಗೊಲೆಯಾಗುತ್ತಿದೆ ಎಂದು ಆರೋಪಿಸಿರುವ ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಮುಖಂಡರು, ಆರ್.ಬಿ.ಐ. ಅಧಿಕಾರ ಬದಲಾವಣೆ, ಸುಪ್ರೀಂ ಕೋರ್ಟ್ ನ್ಯಾಯಾಧೀಶರ ವರ್ಗಾವಣೆ ಹಾಗೂ ಮತದಾರರ ಹೆಸರುಗಳನ್ನು ಡಿಲೀಟ್ ಮಾಡುವ ವ್ಯವಸ್ಥಿತ ಪಿತೂರಿ ಕೇಂದ್ರ ಸರ್ಕಾರದಿಂದ ನಡೆಯುತ್ತಿದೆ ಎಂದು ಕಿಡಿಕಾರಿದ್ದಾರೆ. ಮತದಾರರ ಪಟ್ಟಿಯಲ್ಲಿ ಗೋಲ್‌ಮಾಲ್ ಮಾಡುತ್ತಿರುವ ಚುನಾವಣಾ ಆಯೋಗದ ಅಧಿಕಾರಿಗಳು ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಇನ್ನು ಮಹಿಳಾ ಕಾಂಗ್ರೆಸ್ ಮುಖಂಡರು ಹಾಗೂ ಜ್ಞಾನೇಶ್ ಕುಮಾರ್ ಅವರು ಬಿಜೆಪಿ ಸರ್ಕಾರದ ವಿರುದ್ಧ ಮತ್ತು ಚುನಾವಣಾ ಪ್ರಕ್ರಿಯೆಯ ವೈಫಲ್ಯಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಜ್ಞಾನೇಶ್ ಕುಮಾರ್ ಅವರ ಧೋರಣೆಯು ನೇರವಾಗಿ ಬಿಜೆಪಿಯ ಕೈಯಲ್ಲಿ ಗೋಂಬೆಯಂತಾಗಿದೆ ಎಂದು ಗಂಭೀರವಾಗಿ ಆರೋಪಿಸಿದ್ದಾರೆ. ಇವತ್ತು ನಡೆಯುತ್ತಿರುವ ಪ್ರತಿಭಟನೆಗಳು ಮತ್ತು ಜಾಗೃತಿಗಳು, ಜನರ ಮೂಲಭೂತ ಮತದಾನದ ಹಕ್ಕನ್ನು ಕಸಿದುಕೊಳ್ಳಲಾಗುತ್ತಿದೆ ಎಂಬುದನ್ನು ಖಡಾಖಂಡಿತವಾಗಿ ಸಾರುತ್ತಿವೆ. ಬಿಜೆಪಿ ಮತ್ತು ಚುನಾವಣಾ ಆಯೋಗದ ಏಕಪಕ್ಷೀಯ ನಿರ್ಧಾರಗಳು ಹಾಗೂ ಲೋಪದೋಷಗಳಿಂದಾಗಿ ಜನಸಾಮಾನ್ಯರಿಗೆ ಉಂಟಾಗುತ್ತಿರುವ ಸಮಸ್ಯೆಗಳನ್ನು ಮುಖಂಡರು ತೀವ್ರವಾಗಿ ಖಂಡಿಸಿ, ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.ಪ್ರಜಾಪ್ರಭುತ್ವದ ಮೌಲ್ಯಗಳನ್ನು ಮತ್ತು ಸಂವಿಧಾನಬದ್ಧ ಮತದಾನದ ಹಕ್ಕನ್ನು ಉಳಿಸಿಕೊಳ್ಳಲು ಇಂತಹ ಪ್ರತಿಭಟನೆಗಳು ಅನಿವಾರ್ಯವಾಗಿವೆ ಎಂದು ಪ್ರತಿಪಾದಿಸಿದ್ದಾರೆ.

ಈ ವೇಳೆ ಕಾಂಗ್ರೆಸ್ ನಗರಾಧ್ಯಕ್ಷ ರಾಜಾ ಸಲೀಮ್ ಕಾಶಮ್ಮನವರ , ಗ್ರಾಮೀಣ ಅಧ್ಯಕ್ಷ ಬಸವರಾಜ್ ಶೇಗಾವಿ ಸೇರಿದಂತೆ ಹೆಚ್ಚಿನ ಸಂಖ್ಯೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಭಾಗಿಯಾಗಿದ್ಧರು.

Tags:

error: Content is protected !!