Belagavi

2018ರ ಗಲಾಟೆ ಪ್ರಕರಣ: ಸಚಿವ ಲಕ್ಷ್ಮಣ ಸವದಿಗೆ ನ್ಯಾಯಾಲಯದ ಸಮನ್ಸ್!

Share

ಕಳೆದ 2018ರಲ್ಲಿ ನಡೆದಿದ್ದ ಗಲಾಟೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಹಕಾರ ಸಚಿವ ಲಕ್ಷ್ಮಣ ಸವದಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿ ಅ.9ರಂದು ನ್ಯಾಯಾಲಯಕ್ಕೆ ಖುದ್ದು ಹಾಜರಾಗಿ ವಿಚಾರಣೆ ಎದುರಿಸುವಂತೆ ಅಥಣಿಯ ನಾಲ್ಕನೇ ಜೆಎಂಎಫ್‌ಸಿ ನ್ಯಾಯಾಲಯ ಸೂಚಿಸಿದೆ.

ರಾಜು ಜಮಖಂಡಿಕರ್ ಎಂಬುವವರು ದಾಖಲಿಸಿದ್ದ ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ ಈ ಸಮನ್ಸ್ ಜಾರಿ ಮಾಡಿದೆ. ತಳವಾರ ಸಮಾಜಕ್ಕೆ ಎಷ್ಟು ಅನುದಾನ ನೀಡಲಾಗಿದೆ ಎಂದು ಲಕ್ಷ್ಮಣ ಸವದಿ ಅವರನ್ನು ಪ್ರಶ್ನಿಸಿದ್ದಕ್ಕೆ ತಮ್ಮ ಮೇಲೆ ಸವದಿ ಬೆಂಬಲಿಗರು ಹಲ್ಲೆ ನಡೆಸಿದ್ದರು ಎಂದು ರಾಜು ಜಮಖಂಡಿಕರ್ ಆರೋಪಿಸಿದ್ದರು.
ಲಕ್ಷ್ಮಣ ಸವದಿ ಅವರ ಸಮ್ಮುಖದಲ್ಲೇ ಘಟನೆ ನಡೆದಿದ್ದು, ಅವರ ಪ್ರಚೋದನೆಯಿಂದಲೇ ಗಲಾಟೆ ನಡೆದಿದೆ ಎಂಬ ಆರೋಪವನ್ನು ದೂರುದಾರರು ಮಾಡಿದ್ದರು. ಈ ಸಂಬಂಧ ಅಥಣಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಪ್ರಕರಣದ ವಿಚಾರಣೆ ಮುಂದುವರಿಸಿರುವ ನ್ಯಾಯಾಲಯ, ಇದೀಗ ಲಕ್ಷ್ಮಣ ಸವದಿ ಅವರು ಖುದ್ದು ಹಾಜರಾಗುವಂತೆ ಸಮನ್ಸ್ ನೀಡಿದ್ದು, ಅ.9ರಂದು ನ್ಯಾಯಾಲಯಕ್ಕೆ ಹಾಜರಾಗುವಂತೆ ಆದೇಶಿಸಿದೆ.

Tags:

error: Content is protected !!