BELAGAVI

ಬೆಳಗಾವಿ: ಶ್ರೀನಗರದಲ್ಲಿ 1 ಕಿ.ಮೀ. ರಸ್ತೆ ಹಾಗೂ ಚರಂಡಿ ಕಾಮಗಾರಿಗೆ ಶಾಸಕ ಆಸೀಫ್ ಸೇಠ್ ಚಾಲನೆ!

Share

ಬೆಳಗಾವಿ: ಉತ್ತರ ಕ್ಷೇತ್ರದ ಶಾಸಕ ಆಸಿಫ್ ಸೇಠ್ ಅವರು ಯುವ ನಾಯಕ ಅಮಾನ್ ಸೇಠ್ ಅವರೊಂದಿಗೆ ಶ್ರೀನಗರದಲ್ಲಿ 1 ಕಿಲೋಮೀಟರ್ ರಸ್ತೆ ಹಾಗೂ ಚರಂಡಿ ಕಾಮಗಾರಿಗಳಿಗೆ ಚಾಲನೆ ನೀಡಿದರು.

ಈ ರಸ್ತೆ ಹಾಗೂ ಚರಂಡಿ ಕಾಮಗಾರಿಗಳು ಸ್ಥಳೀಯ ನಿವಾಸಿಗಳ ಬಹುದಿನಗಳ ಬೇಡಿಕೆಯಾಗಿದ್ದು, ಹಲವು ವರ್ಷಗಳಿಂದ ರಸ್ತೆಯನ್ನು ಅಭಿವೃದ್ಧಿಪಡಿಸಿ ಸುರಕ್ಷಿತಗೊಳಿಸುವಂತೆ ನಿವಾಸಿಗಳು ಒತ್ತಾಯಿಸುತ್ತಿದ್ದರು.ಈ ಸಂದರ್ಭದಲ್ಲಿ ಮಹಾನಗರ ಪಾಲಿಕೆ ಸದಸ್ಯ ದಿನೇಶ್ ನಾಶಿಪುಡಿ, ಸ್ಥಳೀಯ ಮುಖಂಡರು, ನಿವಾಸಿಗಳು ಹಾಗೂ ಪಾಲಿಕೆ ಅಧಿಕಾರಿಗಳು ಉಪಸ್ಥಿತರಿದ್ದರು.

ಬಹುದಿನಗಳಿಂದ ಬಾಕಿ ಉಳಿದಿದ್ದ ಸಮಸ್ಯೆಗೆ ಸ್ಪಂದಿಸಿ ಕಾಮಗಾರಿಗೆ ಚಾಲನೆ ನೀಡಿದ ಶಾಸಕ ರಾಜು ಸೇಠ್ ಅವರಿಗೆ ನಿವಾಸಿಗಳು ಕೃತಜ್ಞತೆ ಸಲ್ಲಿಸಿದರು. ರಸ್ತೆ ಅಭಿವೃದ್ಧಿಗೊಂಡು ಸುರಕ್ಷಿತವಾಗಲಿದೆ ಎಂಬ ನಿರೀಕ್ಷೆ ವ್ಯಕ್ತಪಡಿಸಿದ ನಿವಾಸಿಗಳು, ತಮ್ಮ ಬೇಡಿಕೆಗೆ ಸ್ಪಂದಿಸಿ ಕಾಮಗಾರಿಯನ್ನು ಆರಂಭಿಸಿರುವುದಕ್ಕೆ ಶಾಸಕರನ್ನು ಅಭಿನಂದಿಸಿದರು.

Tags:

error: Content is protected !!