ಬೆಳಗಾವಿ ನಗರದಲ್ಲಿ ಬಿಜೆಪಿ ನಾಯಕ ಡಾ. ರವಿ ಪಾಟೀಲ್ ಹಾಗೂ ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಿಸಿದ್ದು ಸರಿಯಲ್ಲ ಎಂದು ಮಾಜಿ ಸಿಎಂ, ಸಂಸದ ಜಗದೀಶ್ ಶೆಟ್ಟರ್ ಹೇಳಿದರು.

ಗುರುವಾರ ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದರು. ಎಸ್ಐಆರ್ ಪ್ರಕ್ರಿಯೆಯ ಬಗ್ಗೆ ಪರಿಶೀಲನೆ ಮಾಡಿ, ತಕಾರರು ಕೊಡಬಾರದು ಎಂದು ಹೇಳಿದರೆ ಪ್ರಕರಣ ದಾಖಲಿಸುವುದು ಸರಿಯಲ್ಲ. ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಇದೆ. ಎಸ್ಐಆರ್ ಪ್ರಕ್ರಿಯೆಯಾದ ಮೇಲೆ ಕಾಂಗ್ರೆಸ್ ಹೋರಾಟ ಮಾಡುತ್ತಿದೆ. ಬಿಎಲ್ಓ ತಕರಾರು ಮಾಡಿದರೆ ಅವರು ವಿಚಾರ ಮಾಡುತ್ತಾರೆ ಎಂದರು.
ಎಸ್ಐಆರ್ ಪ್ರಕ್ರಿಯೆ ಕುರಿತು ರಾಜ್ಯದಲ್ಲಿ ನಡೆಯುತ್ತಿರುವ ದಬ್ಬಾಳಿಕೆಯ ಬಗ್ಗೆ ರಾಜ್ಯ ಬಿಜೆಪಿ ಗಂಭೀರವಾಗಿ ಪರಿಗಣಿಸಿ ಇದಕ್ಕೆ ತಕ್ಕ ಉತ್ತರ ನೀಡಲಾಗುವುದು ಎಂದರು.
