ಬೆಳಗಾವಿ ಶಿವಬಸವನಗರ ಕಾರಂಜಿಮಠದ ಶಿವಾನುಭವ ಮಂಟಪದಲ್ಲಿ ೩೦೪ನೇ ಶಿವಾನುಭವ ಕಾರ್ಯಕ್ರಮ ಸೋಮವಾರ ದಿನಾಂಕ ೫ ಅಕ್ಟೋಬರ್ ೨೦೨೬ರಂದು ಸಾಯಂಕಾಲ ೬ ಗಂಟೆಗೆ ಜರುಗಲಿದೆ.

ಕಾರ್ಯಕ್ರಮದ ಸಾನ್ನಿಧ್ಯವನ್ನು ಪೂಜ್ಯ ಶ್ರೀ ಮ.ನಿ.ಪ್ರ. ಗುರುಸಿದ್ಧ ಮಹಾಸ್ವಾಮಿಗಳವರು ವಹಿಸುವರು. ಹುಕ್ಕೇರಿ ವಿರಕ್ತಮಠದ ಶ್ರೀ ಮ.ನಿ.ಪ್ರ ಶಿವಬಸವ ಮಹಾಸ್ವಾಮಿಗಳು ಹಾನಗಲ್ಲ ಕುಮಾರ ಶಿವಯೋಗಿಗಳ ಜೀವನ ಸಾಧನೆ ಸಮಾಜಕ್ಕೆ ನೀಡಿದ ಕೊಡುಗೆ ವಿಷಯ ಕುರಿತು ಅನುಭಾವ ನೀಡುವರು. ಲಿಂಗರಾಜ ಕಾಲೇಜಿನ ವಿಶ್ರಾಂತ ಪ್ರಾಚಾರ್ಯರಾದ ಪ್ರೊ. ಎಂ. ಎಸ್. ಇಂಚಲ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು. ಇದೇ ಸಂದರ್ಭದಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ವತಿಯಿಂದ ೨೦೨೬ನೇ ಸಾಲಿನ ರಾಜ್ಯಮಟ್ಟದ “ಶಿಕ್ಷಣ ಸೇವಾ ರತ್ನ” ಪ್ರಶಸ್ತಿ ಪಡೆದ ಶ್ರೀ ಕಿರಣ ಚೌಗಲಾ ಅವರನ್ನು ಶ್ರೀಮಠದ ವತಿಯಿಂದ ಸನ್ಮಾನಿಸಲಾಗುವುದು. ಶ್ರೀ ಕಾರಂಜಿಮಠದ ಕುಮಾರೇಶ್ವರ ಸಂಗೀತ ಪಾಠಶಾಲೆಯ ಮಕ್ಕಳಿಂದ ಪ್ರಾರ್ಥನೆ ಜರುಗುವುದು ಎಂದು ಶ್ರೀಮಠದ ಪ್ರಕಟಣೆಯಲ್ಲಿ ತಿಳಿಸಲಾಗಿದೆ.
