State

ಗಾಂಧಿ ಜಯಂತಿ; ಡಾ. ವೂಡೇ ಪಿ. ಕೃಷ್ಣ ಅವರಿಗೆ ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ ಪ್ರದಾನ ಮಾಡಿದ ಸಿಎಂ

Share

ಬೆಂಗಳೂರಿನ ಗಾಂಧಿ ಭವನದಲ್ಲಿ 157ನೇ ಮಹಾತ್ಮ ಗಾಂಧಿ ಜಯಂತಿ ಕಾರ್ಯಕ್ರಮ ವಿಜೃಂಭಣೆಯಿಂದ ಜರುಗಿತು. ಸಿಎಂ ಡಿ.ಕೆ. ಶಿವಕುಮಾರ್ ಅವರು ಗಾಂಧಿ ಸೇವಾ ಪ್ರಶಸ್ತಿ ಪ್ರದಾನ ಮಾಡಿದರು ಹಾಗೂ ಡಿಜಿಟಲ್ ಮ್ಯೂಸಿಯಂ ಲೋಕಾರ್ಪಣೆಗೊಳಿಸಿದರು.

ಬೆಂಗಳೂರಿನ ಗಾಂಧಿ ಭವನದಲ್ಲಿ ನಡೆದ 157ನೇ ಮಹಾತ್ಮ ಗಾಂಧಿ ಜಯಂತಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಯಂತಿ ಕಾರ್ಯಕ್ರಮದಲ್ಲಿ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಮಹಾತ್ಮ ಗಾಂಧೀಜಿ ಮತ್ತು ಲಾಲ್ ಬಹದ್ದೂರ್ ಶಾಸ್ತ್ರಿ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದರು. ಈ ಸಮಾರಂಭದಲ್ಲಿ ನಾಡೋಜ ಡಾ. ವೂಡೇ ಪಿ. ಕೃಷ್ಣ ಅವರಿಗೆ ಪ್ರತಿಷ್ಠಿತ ‘ಮಹಾತ್ಮ ಗಾಂಧಿ ಸೇವಾ ಪ್ರಶಸ್ತಿ’ಯನ್ನು ನೀಡಿ ಗೌರವಿಸಲಾಯಿತು. ಇದೇ ವೇಳೆ ‘ಗಾಂಧಿ ಡಿಜಿಟಲ್ ಮ್ಯೂಸಿಯಂ’ ಮತ್ತು ‘ಗಾಂಧಿ ಪುಸ್ತಕಗಳ ಲೋಕಾರ್ಪಣೆ’ ಕಾರ್ಯಕ್ರಮವನ್ನು ನೆರವೇರಿಸಲಾಯಿತು.
ಕಾರ್ಯಕ್ರಮದಲ್ಲಿ ಸಚಿವರು, ಗಣ್ಯರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು. ರಿಜ್ವಾನ್ ಅರ್ಷದ್, ಎಚ್.ಸಿ. ಬಾಲಕೃಷ್ಣ, ಎಚ್.ಕೆ. ಪಾಟೀಲ್, ಜಿ. ಶಿವಶಂಕರಗೌಡ, ಶರಣಪ್ಪ ಸಲಾದಪುರ, ಜೆ. ಮಂಜುನಾಥ್ ಮತ್ತು ಎಂ.ಎನ್. ಅನುಚೇತ್ ಸೇರಿದಂತೆ ಹಲವು ಪ್ರಮುಖರು ಭಾಗವಹಿಸಿದ್ದರು.

Tags:

error: Content is protected !!