ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ನಡೆದ ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮದಲ್ಲಿ ಮನೆ ಜಾಗದ ಅಳತೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವರ ಮುಂದೆ ತೀವ್ರ ವಾಗ್ವಾದ ನಡೆದಿದೆ. ಮಾಜಿ ಸೈನಿಕರೊಬ್ಬರು ಸಚಿವರಿಗೆ ಏಕವಚನದಲ್ಲಿ ಮಾತನಾಡಿದ್ದಲ್ಲದೆ, ಅಧಿಕಾರಿಗಳ ಜೊತೆಗೂ ಮಾತಿನ ಚಕಮಕಿ ನಡೆಸಿದ್ದಾರೆ.

ಬಾಗಲಕೋಟೆ ಜಿಲ್ಲೆಯ ಬೀಳಗಿ ಪಟ್ಟಣದಲ್ಲಿ ಅಹವಾಲು ಸಲ್ಲಿಸಲು ಬಂದಿದ್ದ ಸಾರ್ವಜನಿಕರ ಸಭೆಯಲ್ಲಿ ಈ ಘಟನೆ ಜರುಗಿದೆ. ಮನೆ ಜಾಗದ ಅಳತೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವರ ಮುಂದೆ ಮಾಜಿ ಸೈನಿಕ ಲಾಲಸಾಬ ಬಡೆಕನವರ ತೀವ್ರ ವಾಗ್ವಾದ ನಡೆಸಿ, ಸಚಿವರಿಗೆ ಏಕವಚನದಲ್ಲಿ ಮಾತನಾಡಿದರು. ಅಲ್ಲದೆ ಸ್ಥಳದಲ್ಲಿದ್ದ ಅಧಿಕಾರಿಗಳ ಜೊತೆಗೂ ಮಾತಿನ ಚಕಮಕಿ ನಡೆಸಿದರು. ಈ ವೇಳೆ ಆಕ್ರೋಶಗೊಂಡ ಮಾಜಿ ಸೈನಿಕನನ್ನು ಸಮಾಧಾನಪಡಿಸಲು ಅಧಿಕಾರಿಗಳು ಹರಸಾಹಸ ಪಡಬೇಕಾಯಿತು.
