Khanapur

ಬೀಡಿ ಗ್ರಾ.ಪಂ. ಆವರಣದಲ್ಲಿ ಖಾಸಗಿ ಕಾರ್ಯಕ್ರಮ: ಇಓ ರಮೇಶ್ ಮೇತ್ರಿ ಹಾರಿಕೆ ಉತ್ತರಕ್ಕೆ ಸಾರ್ವಜನಿಕರ ತೀವ್ರ ಆಕ್ರೋಶ

Share

ಸರ್ಕಾರದ ಪವಿತ್ರ ಕಚೇರಿಯನ್ನು ಖಾಸಗಿ ಸಂಸ್ಥೆಯ ಕಾರ್ಯಕ್ರಮಕ್ಕೆ ನಿಯಮಬಾಹಿರವಾಗಿ ದುರ್ಬಳಕೆ ಮಾಡಿಕೊಂಡರೂ ಸಂಬಂಧಪಟ್ಟ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದೆ ಮೌನ ವಹಿಸಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಕುರಿತು ಪ್ರಶ್ನಿಸಿದ ತಾಲೂಕು ಪಂಚಾಯತ್ ಇಓ ರಮೇಶ್ ಮೇತ್ರಿ ಅವರು ಜವಾಬ್ದಾರಿಯುತ ಉತ್ತರ ನೀಡುವ ಬದಲು ಹಾರಿಕೆ ಉತ್ತರ ನೀಡಿ ಜಾರಿಕೊಳ್ಳುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ತುತ್ತಾಗಿದೆ.

ಖಾನಾಪುರ ತಾಲೂಕಿನ ಬೀಡಿ ಗ್ರಾಮ ಪಂಚಾಯಿತಿ ಕಾರ್ಯಾಲಯದಲ್ಲಿ ಖಾಸಗಿ ಸಂಸ್ಥೆಯ ಶಿಬಿರವನ್ನು ನಿಯಮಬಾಹಿರವಾಗಿ ಆಯೋಜಿಸಿ, ಜನಪ್ರತಿನಿಧಿಗಳ ಜಾಗದಲ್ಲಿ ಖಾಸಗಿ ವ್ಯಕ್ತಿಗಳು ದರ್ಬಾರ್ ನಡೆಸಿದ ಗಂಭೀರ ಪ್ರಕರಣ ಬೆಳಕಿಗೆ ಬಂದಿದ್ದರೂ, ಇಲಾಖೆಯ ಮೇಲಾಧಿಕಾರಿಗಳು ಮೌನಕ್ಕೆ ಶರಣಾಗಿರುವುದು ಖಂಡನೀಯವಾಗಿದೆ. ವರದಿ ಪ್ರಸಾರವಾಗಿ ಸಾಕ್ಷ್ಯಾಧಾರಗಳು ಲಭ್ಯವಿದ್ದರೂ, ಪಿಡಿಒ ಹಾಗೂ ಖಾಸಗಿ ಸಂಸ್ಥೆಯ ಮೇಲೆ ಕ್ರಮ ಜರುಗಿಸಬೇಕಾದ ತಾಲೂಕು ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿ ರಮೇಶ್ ಮೇತ್ರಿ ಅವರು ನಿರ್ಲಕ್ಷ್ಯ ತೋರುತ್ತಿರುವುದು ಭಾರಿ ಆಕ್ರೋಶಕ್ಕೆ ಎಡೆಮಾಡಿಕೊಟ್ಟಿದೆ. ಸರ್ಕಾರಿ ಆಸ್ತಿಯನ್ನು ದುರ್ಬಳಕೆ ಮಾಡಿಕೊಳ್ಳಲು ಕುಮ್ಮಕ್ಕು ನೀಡುತ್ತಿರುವ ಇಂತಹ ಬೇಜವಾಬ್ದಾರಿ ಅಧಿಕಾರಿಗಳ ವಿರುದ್ಧ ಜಿಲ್ಲಾಧಿಕಾರಿಗಳು ಮತ್ತು ಜಿ.ಪಂ. ಸಿಇಒ ಅವರು ತಕ್ಷಣವೇ ಸ್ವಯಂಪ್ರೇರಿತ ತನಿಖೆ ನಡೆಸಿ ಕಠಿಣ ಶಿಸ್ತು ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಹಾಗೂ ರೈತಪರ ಸಂಘಟನೆಗಳು ಬಲವಾಗಿ ಆಗ್ರಹಿಸುತ್ತಿವೆ.

Tags:

error: Content is protected !!