Belagavi

ಬಿಜೆಪಿಗರ ಮೇಲಿನ ಎಫ್.ಐ.ಆರ್’ಗಳನ್ನ ವಾಪಸ್ಸು ಪಡೆಯದಿದ್ದರೇ ಉಗ್ರ ಹೋರಾಟ

Share

ಫಾರ್ಮ್ 6 ಮತ್ತು 7ರ ಮೂಲಕ ಆಕ್ಷೇಪಣೆ ಸಲ್ಲಿಸಿ ಪರಿಶೀಲನೆ ಕೋರುವುದು ಅಪರಾಧವಲ್ಲ. ಎಫ್‌ಐಆರ್ ದಾಖಲಿಸುತ್ತಿರುವುದು ಕಾಂಗ್ರೆಸ್ ಸರ್ಕಾರದ ಸಂಪೂರ್ಣ ದಮನಕಾರಿ ಹಾಗೂ ಸಂವಿಧಾನ ವಿರೋಧಿ ನೀತಿಯಾಗಿದೆ. ದಾಖಲಿಸಿರುವ ಎಫ್.ಐ.ಆರ್’ಗಳನ್ನು ಕೂಡಲೇ ವಾಪಸ್ ಪಡೆಯದಿದ್ದರೆ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದೆಂದು ಬಿಜೆಪಿ ಸಂಸದ ಜಗದೀಶ್ ಶೆಟ್ಟರ್ ಎಚ್ಚರಿಕೆಯನ್ನು ನೀಡಿದರು.

ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸತ್ ಸದಸ್ಯ ಜಗದೀಶ್ ಶೆಟ್ಟರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಮೋದಿ ಸರ್ಕಾರದ ವಿರುದ್ಧ ಟೀಕೆ ಮಾಡಲು ಯಾವುದೇ ವಿಷಯವಿಲ್ಲದೆ ಇವಿಎಂ ಹಾಗೂ ಆಯೋಗದ ಬಗ್ಗೆ ಅಪಪ್ರಚಾರ ಮಾಡುತ್ತಿದೆ ಎಂದರು. ಫಾರ್ಮ್ 6 ಮತ್ತು 7ರ ಮೂಲಕ ಆಕ್ಷೇಪಣೆ ಸಲ್ಲಿಸಿ ಪರಿಶೀಲನೆ ಕೋರುವುದು ಅಪರಾಧವಲ್ಲ. ಶಾಸಕ ಅಭಯ್ ಪಾಟೀಲ್ ಅಥವಾ ಡಾ. ರವಿ ಪಾಟೀಲ್ ಪತ್ರ ನೀಡಿರುವುದರಲ್ಲಿ ತಪ್ಪಿಲ್ಲ. ಆದರೆ, ಅಬ್ಜೆಕ್ಷನ್ ಕೊಡುವವರ ಮೇಲೆ ಎಫ್‌ಐಆರ್ ದಾಖಲಿಸುತ್ತಿರುವುದು ಕಾಂಗ್ರೆಸ್ ಸರ್ಕಾರದ ಸಂಪೂರ್ಣ ದಮನಕಾರಿ ಹಾಗೂ ಸಂವಿಧಾನ ವಿರೋಧಿ ನೀತಿಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ದಾಖಲಿಸಿರುವ ಎಫ್‌ಐಆರ್‌ಗಳನ್ನು ಕೂಡಲೇ ವಾಪಸ್ ಪಡೆಯದಿದ್ದರೆ ಬಿಜೆಪಿ ವತಿಯಿಂದ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಅವರು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಇದೇ ವೇಳೆ ರಾಜ್ಯದಲ್ಲಿನ ಬರಗಾಲದ ಪರಿಸ್ಥಿತಿಯ ಬಗ್ಗೆ ಪ್ರಸ್ತಾಪಿಸಿದ ಜಗದೀಶ್ ಶೆಟ್ಟರ್, ಕೇಂದ್ರ ಸರ್ಕಾರದ ತಂಡ ವರದಿ ನೀಡುವವರೆಗೆ ಕಾಯದೆ ರಾಜ್ಯ ಸರ್ಕಾರವೇ ತನ್ನ ಸ್ವಂತ ಅನುದಾನದಿಂದ ಕೂಡಲೇ ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕು ಎಂದರು. ಕುಡಿಯುವ ನೀರಿನ ಸಮಸ್ಯೆ ಇರುವ ಕಡೆಗಳಲ್ಲಿ ತಕ್ಷಣ ಟ್ಯಾಂಕರ್ ಮೂಲಕ ನೀರು ಪೂರೈಸಬೇಕು ಹಾಗೂ ರೈತರ ಸಾಲ ಮರುಪಾವತಿಯನ್ನು ಮುಂದೂಡುವುದು ಅಥವಾ ಸಾಲ ಮನ್ನಾ ಪ್ರಕ್ರಿಯೆಯನ್ನು ಆರಂಭಿಸಬೇಕು ಎಂದು ಆಗ್ರಹಿಸಿದರು. ಕೇಂದ್ರದಿಂದ ನೆರವು ಬರುವುದು ಹಾಗಿರಲಿ, ರಾಜ್ಯ ಸರ್ಕಾರವೇ ಮಧ್ಯಂತರ ಪರಿಹಾರಕ್ಕೆ ಮುಂದಾಗಬೇಕೆಂದು ಒತ್ತಾಯಿಸಿದರು.

Tags:

error: Content is protected !!