Belagavi

ಕರವೇ ರಾಜ್ಯಾಧ್ಯಕ್ಷ ನಾರಾಯಣಗೌಡರಿಂದ ಬೆಳಗಾವಿ ಡಿಸಿ ಮೊಹ್ಮದ್ ರೋಷನ್ ಸನ್ಮಾನ

Share

ಬೆಳಗಾವಿಯಲ್ಲಿ ಕನ್ನಡ ಭಾಷೆ ಮತ್ತು ಸಂಸ್ಕೃತಿಯ ಉಳಿವಿಗೆ ಶ್ರಮಿಸುತ್ತಿರುವ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಅವರ ಕಾರ್ಯವೈಖರಿಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಕರ್ನಾಟಕ ರಕ್ಷಣಾ ವೇದಿಕೆಯ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ಡಿಸಿಯವರನ್ನು ಆತ್ಮೀಯವಾಗಿ ಸನ್ಮಾನಿಸಿ, ಕನ್ನಡಪರ ಕಾಳಜಿಯನ್ನು ಕೊಂಡಾಡಿದ್ದಾರೆ.

ಕರವೇ ರಾಜ್ಯಾಧ್ಯಕ್ಷ ಟಿ.ಎ. ನಾರಾಯಣಗೌಡ ಅವರು ಬೆಳಗಾವಿ ಜಿಲ್ಲಾಧಿಕಾರಿ ಮೊಹ್ಮದ್ ರೋಷನ್ ಅವರನ್ನು ಭೇಟಿ ಮಾಡಿ ವಿಶೇಷವಾಗಿ ಸನ್ಮಾನಿಸಿದರು. ಜಿಲ್ಲೆಯಲ್ಲಿ ಕನ್ನಡ ಪರ ಕಾಳಜಿ ಮತ್ತು ಆಡಳಿತದಲ್ಲಿ ಕನ್ನಡ ಕಟ್ಟುನಿಟ್ಟಿನ ಅನುಷ್ಠಾನಕ್ಕಾಗಿ ಶ್ರಮಿಸುತ್ತಿರುವ ಡಿಸಿಯವರ ಸೇವೆಯನ್ನು ಕರವೇ ಮುಖಂಡರು ಮುಕ್ತಕಂಠದಿಂದ ಪ್ರಶಂಸಿಸಿದರು. ಈ ವೇಳೆ ಕರವೇ ನಾರಾಯಣಗೌಡ ಬಣದ ಜಿಲ್ಲಾಧ್ಯಕ್ಷ ದೀಪಕ್ ಗುಡಗನಟ್ಟಿ ಹಾಗೂ ಪ್ರಮುಖರಾದ ಸುರೇಶ್ ಗವನ್ನವರ ಸೇರಿದಂತೆ ಇತರ ಪ್ರಮುಖ ಪದಾಧಿಕಾರಿಗಳು ಉಪಸ್ಥಿತರಿದ್ದು, ಸನ್ಮಾನ ಕಾರ್ಯಕ್ರಮ ಯಶಸ್ವಿಗೊಳಿಸಿದರು.

Tags:

error: Content is protected !!