bagalkot

ಎಸ್‌ಐಆರ್ (SIR) ವಿಚಾರದಲ್ಲಿ ಬಿಜೆಪಿ ಕುತಂತ್ರ ರಾಜಕಾರಣ: ಸಚಿವ ವಿಜಯಾನಂದ ಕಾಶಪ್ಪನವರ್ ಗಂಭೀರ ಆರೋಪ!

Share

ರಾಜ್ಯ ಹಾಗೂ ರಾಷ್ಟ್ರೀಯ ರಾಜಕಾರಣದಲ್ಲಿ ಎಸ್‌ಐಆರ್ (SIR) ಹೆಸರಿನಲ್ಲಿ ಬಿಜೆಪಿ ದೊಡ್ಡ ಮಟ್ಟದ ಕುತಂತ್ರ ನಡೆಸುತ್ತಿದೆ ಎಂದು ಅಮರಾವತಿಯಲ್ಲಿ ಸಚಿವ ವಿಜಯಾನಂದ ಕಾಶಪ್ಪನವರ್, ತೀವ್ರವಾಗಿ ವಾಗ್ದಾಳಿ ನಡೆಸಿದ್ದಾರೆ. ಅಲ್ಪಸಂಖ್ಯಾತರು, ದಲಿತರು ಹಾಗೂ ಹಿಂದುಳಿದ ವರ್ಗಗಳ ಮತಗಳನ್ನು ಡಿಲೀಟ್ ಮಾಡುವುದೇ ಕಮಲಪಕ್ಷದ ಮುಖ್ಯ ತಂತ್ರ ಎಂದು ಅವರು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಎಸ್‌ಐಆರ್ (SIR) ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಸಂಪೂರ್ಣ ಎಚ್ಚರಿಕೆ ವಹಿಸಿದೆ ಎಂದು ತಿಳಿಸಿದ ಸಚಿವ ವಿಜಯಾನಂದ ಕಾಶಪ್ಪನವರ್, ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಿದ್ದ ಬಿಜೆಪಿ ಈಗ ಎಸ್‌ಐಆರ್ ಅಸ್ತ್ರ ಹಿಡಿದಿದೆ ಎಂದು ಕಿಡಿಕಾರಿದರು. ದಕ್ಷಿಣ ಭಾರತದಲ್ಲಿ ನೇರವಾಗಿ ಅಧಿಕಾರಕ್ಕೆ ಬರಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ, 2028ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಕುತಂತ್ರದ ಮೂಲಕ ಗೆಲುವು ಸಾಧಿಸಲು ಬಿಜೆಪಿ ಯತ್ನಿಸುತ್ತಿದೆ ಎಂದು ದೂರಿದರು. ಮುದ್ರಣಗೊಂಡಿರುವ ಸಾವಿರಾರು ಫಾರಂಗಳ ಮಾಹಿತಿ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಹೇಗೆ ತಿಳಿಯಿತು ಎಂದು ಪ್ರಶ್ನಿಸಿದ ಅವರು, ಚುನಾವಣಾ ಆಯೋಗವೇ ಇವರಿಗೆ ಮಾಹಿತಿ ನೀಡುತ್ತಿದೆಯೇ ಎಂದು ಸಂಶಯ ವ್ಯಕ್ತಪಡಿಸಿದರು.

ಮುಂದುವರೆದು ಮಾತನಾಡಿದ ಅವರು, ರಾಜ್ಯದಲ್ಲಿ ಸರ್ಕಾರದ ಜನಪರ ಯೋಜನೆಗಳನ್ನು ಸಹಿಸಿಕೊಳ್ಳಲಾಗದೆ ಬಿಜೆಪಿ ನಾಯಕರು ಪಾದಯಾತ್ರೆ ಹಾಗೂ ಪ್ರತಿಭಟನೆಗಳ ನಾಟಕವಾಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು. ಬಿಜೆಪಿಯ ಯಾವುದೇ ಕುತಂತ್ರಗಳು ರಾಜ್ಯದಲ್ಲಿ ಯಶಸ್ವಿಯಾಗುವುದಿಲ್ಲ ಎಂದು ಸ್ಪಷ್ಟಪಡಿಸಿದ ಕಾಶಪ್ಪನವರ್, ಜನತೆಯ ಬೆಂಬಲದೊಂದಿಗೆ ಮುಂಬರುವ 2028ರ ಚುನಾವಣೆಯಲ್ಲೂ ನಮ್ಮದೇ ಸರಕಾರ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

Tags:

error: Content is protected !!