ಪಶ್ಚಿಮ ಪದವೀಧರ ಕ್ಷೇತ್ರದ ಚುನಾವಣೆ ಕಾವು ಈಗ ರಂಗೇರುತ್ತಿದ್ದು, ಇಂದು ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಡಾ. ಆರ್.ಎಂ. ಕುಬೇರಪ್ಪನವರು ತಮ್ಮ ಬೆಂಬಲಿಗರೊಂದಿಗೆ ಆಗಮಿಸಿ ತಮ್ಮ ಉಮೇದುವಾರಿಕೆ ಸಲ್ಲಿಸಿದರು.

ಈಗಾಗಲೇ ಕಾಂಗ್ರೆಸ್ ಪಕ್ಷದಿಂದ ಅಧಿಕೃತವಾಗಿ ಮೋಹನ್ ಲಿಂಬಿಕಾಯಿ ಅವರು ತಮ್ಮ ನಾಮಪತ್ರ ಸಲ್ಲಿಸಿ ಚುನಾವಣಾ ಅಖಾಡದಲ್ಲಿದ್ದಾರೆ. ಈಗ ಟಿಕೆಟ್ ಕೈತಪ್ಪಿದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಬಂಡಾಯ ಅಭ್ಯರ್ಥಿಯಾಗಿ ಡಾ. ಆರ್.ಎಂ. ಕುಬೇರಪ್ಪನವರು ಧಾರವಾಡ ಹೆಡ್ ಪೋಸ್ಟ್ ಆಫೀಸ್ ಮಾರ್ಗವಾಗಿ ಬೆಂಬಲಿಗರೊಂದಿಗೆ ಆಗಮಿಸಿ ನಾಮಪತ್ರ ಸಲ್ಲಿಸಿದರು.
ಇದು ಈಗ ಕಾಂಗ್ರೆಸ್ ಅಧಿಕೃತ ಅಭ್ಯರ್ಥಿ ಮೋಹನ್ ಲಿಂಬಿಕಾಯಿ ಅವರಿಗೆ ತಲೆಬಿಸಿ ತಂದೊಡ್ಡುತ್ತದಾ ಎಂಬ ಪ್ರಶ್ನೆಗಳು ಚರ್ಚೆಗೆ ಹುಟ್ಟುಹಾಕಿವೆ. ಒಟ್ಟಿನಲ್ಲಿ, ಇಂದು ಪಶ್ಚಿಮ ಪದವೀಧರ ಕ್ಷೇತ್ರದ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ ಕೊನೆಯ ದಿನವಾದ ಹಿನ್ನೆಲೆಯಲ್ಲಿ, ಬಿಜೆಪಿ ಅಭ್ಯರ್ಥಿ ಎಸ್.ವಿ. ಸಂಕನೂರು ಹಾಗೂ ಕಾಂಗ್ರೆಸ್ ಬಂಡಾಯ ಅಭ್ಯರ್ಥಿ ಡಾ. ಆರ್.ಎಂ. ಕುಬೇರಪ್ಪನವರು ನಾಮಪತ್ರ ಸಲ್ಲಿಸಿದ್ದಾರೆ.
