State

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ;

Share

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಹಾಗೂ ಮತಗಳವು ಕುರಿತಂತೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಮಂಗಳವಾರ ವೀಡಿಯೋ ಕಾನ್ಫರೆನ್ಸ್ ಮೂಲಕ ಉನ್ನತ ಮಟ್ಟದ ಸಭೆ ನಡೆಸಿದರು.

ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಾಗೂ ಮತಗಳವು ಸಂಬಂಧದ ವಿಷಯಗಳ ಕುರಿತು ಚರ್ಚಿಸಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸಿಂಗ್ ಸುರ್ಜೆವಾಲ ಅವರ ನೇತೃತ್ವದಲ್ಲಿ ಮಂಗಳವಾರ ಸಿಎಂ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ವಿಶೇಷ ವಿಡಿಯೋ ಕಾನ್ಫರೆನ್ಸ್ ಸಭೆ ಜರುಗಿತು. ಸಭೆಯಲ್ಲಿ ರಾಜ್ಯದ ಸಚಿವರು, ಕಾಂಗ್ರೆಸ್ ಸಂಸದರು, ಶಾಸಕರು ಹಾಗೂ ಪರಾಜಿತ ಅಭ್ಯರ್ಥಿಗಳು ಭಾಗವಹಿಸಿ ಅಗತ್ಯ ಮಾರ್ಗದರ್ಶನ ಪಡೆದರು. ಈ ಮಹತ್ವದ ಸಭೆಯಲ್ಲಿ ನಿಕಟಪೂರ್ವ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಾ. ಜಿ. ಪರಮೇಶ್ವರ್, ಸಚಿವರಾದ ಎಸ್.ಎಸ್. ಮಲ್ಲಿಕಾರ್ಜುನ, ಜಮೀರ್ ಅಹ್ಮದ್, ಬಾಲಕೃಷ್ಣ, ಪುಟ್ಟರಂಗ ಶೆಟ್ಟಿ, ಟಿ. ರಘುಮೂರ್ತಿ ಹಾಗೂ ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ವಿನಯ್ ಕುಮಾರ್ ಸೊರಕೆ ಸೇರಿದಂತೆ ಅನೇಕ ಪ್ರಮುಖರು ಉಪಸ್ಥಿತರಿದ್ದು ಪ್ರಮುಖ ತೀರ್ಮಾನಗಳ ಕುರಿತು ಮಂಥನ ನಡೆಸಿದರು.

Tags:

error: Content is protected !!