ಸಚಿವ ಸಂಪುಟದಲ್ಲಿ ಮಹಿಳಾ ಸಚಿವರು ಇದ್ದೇ ಇರುತ್ತಾರೆ ಎಂದಿದ್ದಾರೆ. ಅಲ್ಲದೆ, ಮತದಾರರ ಪಟ್ಟಿ ಪರಿಷ್ಕರಣೆ (SIR) ವಿಚಾರದಲ್ಲಿ ಯಾವುದೇ ಗೊಂದಲವಿಲ್ಲ ಎಂದು ಸಚಿವ ಸತೀಶ್ ಜಾರಕಿಹೊಳಿ,ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಮಾಧ್ಯಮಗೋಷ್ಟಿ ನಡೆಸಿ ಮಾತನಾಡಿದ ಸಚಿವ ಸತೀಶ್ ಜಾರಕಿಹೊಳಿ, ಸಚಿವ ಸ್ಥಾನದ ಕುರಿತು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ನೀಡಿರುವ ಹೇಳಿಕೆಗೆ ಪ್ರತಿಕ್ರಿಯಿಸಿ, ಸಂಪುಟದಲ್ಲಿ ಮಹಿಳಾ ಸಚಿವರು ಕಡ್ಡಾಯವಾಗಿ ಇರುತ್ತಾರೆ ಎಂದರು. ಇದರ ಬಗ್ಗೆ ಮುಖ್ಯಮಂತ್ರಿಗಳು ಹಾಗೂ ಹೈಕಮಾಂಡ್ ಅಂತಿಮ ನಿರ್ಣಯ ಕೈಗೊಳ್ಳಲಿದ್ದು, ತಡವಾಗಿದ್ದರೂ ಆದಷ್ಟು ಬೇಗ ಮಹಿಳಾ ಪ್ರತಿನಿಧಿಯನ್ನು ನೀಡಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬೈಟ್
ಇನ್ನು ಎಸ್.ಐ.ಆರ್ (SIR) ವಿಚಾರದಲ್ಲಿ ನಡೆಯುತ್ತಿರುವ ಹೋರಾಟದ ಕುರಿತು ಮಾತನಾಡಿದ ಅವರು, ಚುನಾವಣಾ ಆಯೋಗದ ಆಯುಕ್ತರು ದೆಹಲಿಯಿಂದ ನೇಮಕಗೊಂಡವರಾಗಿದ್ದು, ಇದರಲ್ಲಿ ನಮ್ಮ ಪಾತ್ರವೇನಿದೆ ಎಂದು ಪ್ರಶ್ನಿಸಿದರು. ನಾವು ಯಾರ ಹೆಸರನ್ನು ತೆಗೆದುಹಾಕಲು ಅರ್ಜಿ ಸಲ್ಲಿಸಿಲ್ಲ ಹಾಗೂ ಯಾವ ಪಕ್ಷದವರನ್ನು ಕೈಬಿಡಿ ಎಂದು ಹೇಳಿಲ್ಲ. ಸರಿಯಾಗಿರುವವರನ್ನು ಮಾತ್ರ ಪರಿಶೀಲಿಸಬೇಕು ಎಂದ ಅವರು, ಕಾಂಗ್ರೆಸ್ ಪಕ್ಷವು ಈ ಬಗ್ಗೆ ಪ್ರತಿಭಟಿಸಿ ಜನರನ್ನು ಜಾಗೃತಗೊಳಿಸಿದ್ದು, ಈ ಹಿನ್ನೆಲೆಯಲ್ಲಿ ಕೆಲ ಅರ್ಜಿಗಳನ್ನು ಮರಳಿ ಪಡೆದಿದ್ದಾರೆ ಎಂದು ತಿಳಿಸಿದರು.
