ಭಾರತ ಚುನಾವಣಾ ಆಯೋಗದ ಎಸ್ಐಆರ್ ಪ್ರಕ್ರಿಯೆಯಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ, ಕೇಂದ್ರ ಮುಖ್ಯ ಚುನಾವಣಾ ಅಧಿಕಾರಿ ಜ್ಞಾಣೇಶ ಕುಮಾರ ರಾಜೀನಾಮೆ ಆಗ್ರಹಿಸಿ ಧಾರವಾಡದಲ್ಲಿ ಕಾಂಗ್ರೆಸ್ ಪಲ್ಷದ ವತಿಯಿಂದ ಧರಣಿ ಸತ್ಯಾಗ್ರಹ ನಡೆಸಲಾಯಿತು.
ನಗರದ ದಕ್ಷಿಣ ಭಾರತ ಹಿಂದಿ ಪ್ರಚಾರ ಸಭಾ ವೃತ್ತದಲ್ಲಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಸ್ಥಳೀಯ ಮುಖಂಡರು ಹಾಗೂ ಕಾರ್ಯಕರ್ತರು ಕೇಂದ್ರ ಚುನಾವಣಾ ಆಯೋಗ ಸೇರಿ ಕೇಂದ್ರ ಬಿಜೆಪಿ ವಿರುದ್ಧ ಧಿಕ್ಕಾರ ಕೂಗಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು. ಎಸ್ಐಆರ್ ಹೆಸರಿನಲ್ಲಿ ಮತದಾರರ ಹಕ್ಕುಗಳಿಗೆ ಧಕ್ಕೆ ತರುವ ಪ್ರಯತ್ನ ನಡೆಯುತ್ತಿದೆ. ಕೇಂದ್ರ ಚುನಾವಣಾ ಆಯೋಗದ ಮುಖ್ಯ ಚುನಾವಣಾಧಿಕಾರಿ ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು. ಜತೆಗೆ ಎಸ್ಐಆರ್ ವಿರುದ್ಧ ಹೋರಾಟ ನಡೆಸುತ್ತಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಬಂಧಿಸಿರುವುದು ಖಂಡನೀಯ. ಎಂದು “ಜ್ಞಾನೇಶ್ ಕುಮಾರ್ ಹಠಾವೋ, ದೇಶ ಬಚಾವೋ” ಎಂಬ ಘೋಷಣೆಗಳನ್ನು ಕೂಗಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು, ಎಸ್ಐಆರ್ ಪ್ರಕ್ರಿಯೆಯಲ್ಲಿ ನಡೆಯುತ್ತಿರುವ ಅಕ್ರಮಗಳ ಕುರಿತು ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.
