goa

ಗೋವಾದ ಸಂಸ್ಕೃತಿ ಮತ್ತು ಪರಿಸರ ರಕ್ಷಣೆಗೆ ಕಾಂಗ್ರೆಸ್‌ನಿಂದ ಬೃಹತ್ ‘ಗೋಯ್ ರಖೋನ್ ಯಾತ್ರೆ’! ಸಿಎಂ ಡಿ.ಕೆ.ಶಿವಕುಮಾರ್ ಭಾಗಿ

Share

ಗೋವಾದಲ್ಲಿ ಪರಿಸರ, ಸಂಸ್ಕೃತಿ ಮತ್ತು ಜನರ ಹಕ್ಕುಗಳನ್ನು ರಕ್ಷಿಸುವ ಉದ್ದೇಶದಿಂದ ಹಮ್ಮಿಕೊಂಡಿರುವ ಮಹತ್ವದ ‘ಗೋಯ್ ರಖೋನ್ ಯಾತ್ರೆ’ಗೆ ಅಭೂತಪೂರ್ವ ಬೆಂಬಲ ವ್ಯಕ್ತವಾಗಿದೆ. ಕರಾವಳಿ ರಾಜ್ಯದಲ್ಲಿ ಪಕ್ಷದ ನಾಯಕರ ನೇತೃತ್ವದಲ್ಲಿ ನಡೆದ ಈ ಐತಿಹಾಸಿಕ ಯಾತ್ರೆಯಲ್ಲಿ ಸಿಎಂ ಡಿ.ಕೆ.ಶಿವಕುಮಾರ್ ಭಾಗಿಯಾದರು.

ಕೋರ್ಟಾಲಿಮ್‌ನಲ್ಲಿ ನಡೆದ ‘ಗೋಯ್ ರಖೋನ್ ಯಾತ್ರೆ’ಯಲ್ಲಿ ಕರ್ನಾಟಕದ ಉಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಜಿಪಿಸಿಸಿ ಅಧ್ಯಕ್ಷ ಗಿರೀಶ್ ಚೋಡನಕರ್ ಹಾಗೂ ಎಐಸಿಸಿ ಗೋವಾ ಉಸ್ತುವಾರಿ ಮಾಣಿಕ್ ರಾವ್ ಠಾಕ್ರೆ ಸೇರಿದಂತೆ ಕಾಂಗ್ರೆಸ್‌ನ ಪ್ರಮುಖ ನಾಯಕರು ಮತ್ತು ಕಾರ್ಯಕರ್ತರು ಸಕ್ರಿಯವಾಗಿ ಪಾಲ್ಗೊಂಡರು.

ಗೋವಾದ ಭವಿಷ್ಯಕ್ಕಾಗಿ ನಡೆಸುತ್ತಿರುವ ಈ ಹೋರಾಟಕ್ಕೆ ಸಾರ್ವಜನಿಕರಿಂದ ಸಿಕ್ಕಿರುವ ಅಪಾರ ಬೆಂಬಲ ನಮ್ಮ ಸಂಕಲ್ಪವನ್ನು ಮತ್ತಷ್ಟು ಗಟ್ಟಿಗೊಳಿಸಿದೆ ಎಂದು ನಾಯಕರು ಈ ವೇಳೆ ಅಭಿಪ್ರಾಯಪಟ್ಟರು. ಈ ವೇಳೆ ಕಾಂಗ್ರೆಸ್ ಯುವ ಮುಖಂಡ ಮೃಣಾಲ್ ಹೆಬ್ಬಾಳಕರ್ ಸೇರಿದಂತೆ ಇನ್ನುಳಿದವರು ಭಾಗಿಯಾಗಿದ್ಧರು.

Tags:

error: Content is protected !!