State

ಸಂವಿಧಾನದ ಧ್ವನಿಯನ್ನು ಮುಚ್ಚುವ ಪ್ರಯತ್ನ ಕೇಂದ್ರ ಸರ್ಕಾರ ಮಾಡ್ತೀದೆ

Share

ದೆಹಲಿ ಪ್ರತಿಭಟನೆಗಳು, ಮೆಟ್ರೋ ರಸ್ತೆ ಹಾಗೂ ಇಂಟರ್ನೆಟ್ ಬಂದ್ ಮಾಡುತ್ತಿರುವ ವಿಚಾರವಾಗಿ ಸಿಎಂ ಡಿ.ಕೆ.ಶಿವಕುಮಾರ್ ಅವರು ಪ್ರತಿಕ್ರಿಯಿಸಿದ್ದು, ಪ್ರತಿಭಟನೆ ಮಾಡುವ ಹಕ್ಕನ್ನು ಮತ್ತು ಜನರ ಧ್ವನಿಯನ್ನು ಹತ್ತಿಕ್ಕುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಟೀಕಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನದ ಧ್ವನಿಯನ್ನು ಮುಚ್ಚುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ಕರ್ನಾಟಕದ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರೊಂದಿಗೆ ಬೆಂಗಳೂರಿನ ರಿಚ್ಮಂಡ್ ರಸ್ತೆಯಲ್ಲಿರುವ ಕೇಂದ್ರ ಕಮಾಂಡ್ ಸೆಂಟರ್ ಮತ್ತು ಇಂಟಿಗ್ರೇಟೆಡ್ ಪೊಲೀಸ್ ಭವನಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ನಂತರ ಮಾಧ್ಯಮಗಳೊಂದಿಗೆ ಸಿಎಂ ಡಿ.ಕೆ.ಶಿವಕುಮಾರ್ ಮಾತನಾಡಿದರು. ದೆಹಲಿ ಪ್ರತಿಭಟನೆಗಳು, ಮೆಟ್ರೋ ರಸ್ತೆ ಹಾಗೂ ಇಂಟರ್ನೆಟ್ ಬಂದ್ ಮಾಡುತ್ತಿರುವ ಕುರಿತು ಪ್ರತಿಕ್ರಿಯಿಸಿದ ಅವರು, ಪ್ರತಿಭಟನೆ ಮಾಡುವ ಹಕ್ಕನ್ನು ಮತ್ತು ಜನರ ಧ್ವನಿಯನ್ನು ಹತ್ತಿಕ್ಕುವ ಕೆಲಸವನ್ನು ಕೇಂದ್ರ ಸರ್ಕಾರ ಮಾಡುತ್ತಿದೆ ಎಂದು ಟೀಕಿಸಿದ್ದಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂವಿಧಾನದ ಧ್ವನಿಯನ್ನು ಮುಚ್ಚುವ ಪ್ರಯತ್ನ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ರಾಜ್ಯದಲ್ಲಿ ಮತ್ತು ಬೆಂಗಳೂರು ನಗರದಲ್ಲಿ ಅಪರಾಧಗಳನ್ನು (Crimes) ಕಡಿಮೆ ಮಾಡುವ ದೃಷ್ಟಿಯಿಂದ ಅಂತರರಾಷ್ಟ್ರೀಯ ಮಟ್ಟದ ಕಮಾಂಡ್ ಸೆಂಟರ್ ಅನ್ನು ನಿರ್ಮಿಸಲಾಗಿದೆ. ಇದರ ಮೂಲಕ ಪ್ರತಿ ವಾಹನ ಹಾಗೂ ಓಡಾಟದ ಮೇಲೆ ನಿಗಾ ಇಡಲು ದೊಡ್ಡ ಸ್ಕ್ರೀನ್‌ಗಳನ್ನು ವ್ಯವಸ್ಥೆ ಮಾಡಲಾಗಿದೆ ಎಂದು ಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

ಇನ್ನು ಪೊಲೀಸ್ ಇಲಾಖೆಯಲ್ಲಿ ಹೊಸ ಹುದ್ದೆಗಳನ್ನು ಸೃಷ್ಟಿಸಲಾಗುತ್ತಿದ್ದು, ಸೈಬರ್ ಕ್ರೈಮ್ ಹಾಗೂ ಇTರ ಅಪರಾಧಗಳ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲಾಗುತ್ತಿದೆ. ಜೊತೆಗೆ ಪೊಲೀಸ್ ಸಿಬ್ಬಂದಿಗೆ ಅನುಕೂಲವಾಗಲು ಕ್ವಾರ್ಟರ್ಸ್ (Police Housing) ನಿರ್ಮಿಸುವ ಬಗ್ಗೆಯೂ ಗಮನಹರಿಸಲಾಗಿದೆ ಎಂದಿದ್ದಾರೆ.

Tags:

error: Content is protected !!