ಬೆಳಗಾವಿ ಜಿಲ್ಲೆ, ರಾಮದುರ್ಗ ತಾಲೂಕಿನ ತೋರಣಗಟ್ಟಿ ಗ್ರಾಮದಲ್ಲಿ ರೈತರಿಗೆ ದೊಡ್ಡ ಆಘಾತ ಎದುರಾಗಿದೆ.ಶಾರ್ಟ್ ಸರ್ಕ್ಯೂಟ್ ನಿಂದ ಸುಮಾರು 30 ಎಕರೆ ಕಬ್ಬಿನ ಬೆಳೆ ಸಂಪೂರ್ಣ ಸುಟ್ಟು ಕರಕಲಾಗಿದೆ. ವರ್ಷವಿಡೀ ಬೆಳೆದ ಬೆಳೆ ಕಣ್ಣೆದುರೇ ಬೂದಿಯಾಗಿದೆ.
ಅತ್ತ ಕಬ್ಬಿನ ಬೆಲೆಗಾಗಿ ಹೋರಾಟ ನಡೆಯುತ್ತಿದ್ದರೆ, ಇತ್ತ ಲೋಡ್ ಶೆಡ್ಡಿಂಗ್ ನೆಪದಲ್ಲಿ ಸರಿಯಾದ ವಿದ್ಯುತ್ ಸರಬರಾಜು ಇಲ್ಲದಿರುವುದೇ ಈ ದುರಂತಕ್ಕೆ ಕಾರಣ ಎಂದು ರೈತರು ಆರೋಪಿಸಿದ್ದಾರೆ.ಘಟನೆ ನಡೆದು ಗಂಟೆಗಳಾದರೂ ಯಾವೊಬ್ಬ ಅಧಿಕಾರಿಯೂ ಸ್ಥಳಕ್ಕೆ ಬಂದಿಲ್ಲ. ಇನ್ನಾದರೂ ಸಂಬಂಧಪಟ್ಟ ಇಲಾಖೆ ಹಾಗೂ ಸ್ಥಳೀಯ ಶಾಸಕರು ಮಧ್ಯಪ್ರವೇಶಿಸಿ ಸಂತ್ರಸ್ತ ರೈತರಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ ಅಧಿಕಾರಿಗಳ ನಿರ್ಲಕ್ಷ್ಯದ ವಿರುದ್ಧ ಆಕ್ರೋಶ | ರೈತರಿಗೆ ಸರ್ಕಾರ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ
