Khanapur

ಮಹಿಳೆಯರು ಸ್ವಾವಲಂಬಿಗಳಾಗಿ, ಆರ್ಥಿಕವಾಗಿ ಸಬಲರಾಗಲು ಇಂತಹಾ ತರಬೇತಿಗಳು ಸಹಾಯಕಾರಿ:- ಅಶ್ವಿನಿ ಬೆಳವಡಿ

Share

ಸವದತ್ತಿಯ ಶ್ರೀ ಮಹಾಲಕ್ಷ್ಮೀ ರೀಕ್ರಿಯೇಶನ್ ಕ್ಲಬ್ ವತಿಯಿಂದ ನಗರದ ಮಹಿಳೆಯರಿಗಾಗಿ ಆಯೋಜಿಸಿದ್ದ ಉಚಿತ ಹೊಲಿಗೆ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಭಾಗವಹಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಬೆಳಗಾವಿ ಜಿಲ್ಲಾ ಗ್ರಾಮೀಣ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಅಶ್ವಿನಿ ಬೆಳವಡಿ ಅವರು ಮಾತನಾಡಿ

ಮಹಿಳೆಯರು ಸ್ವಾವಲಂಬಿಗಳಾಗಿ, ಆರ್ಥಿಕವಾಗಿ ಸಬಲರಾಗಲು ಇಂತಹ ಕೌಶಲ್ಯಾಧಾರಿತ ತರಬೇತಿ ಕಾರ್ಯಕ್ರಮಗಳು ನಿರಂತರವಾಗಿ ನಡೆಯಬೇಕು. ತರಬೇತಿಯ ಸದುಪಯೋಗ ಪಡೆದುಕೊಂಡು ಹೆಚ್ಚಿನ ಮಹಿಳೆಯರು ಸ್ವಯಂಪ್ರೇರಿತ ಉದ್ಯಮಿಗಳಾಗಿ ಹೊರಹೊಮ್ಮಿ, ತಮ್ಮ ಕುಟುಂಬದ ಆರ್ಥಿಕ ಅಭಿವೃದ್ಧಿಯ ಜೊತೆಗೆ ಸಮಾಜದ ಪ್ರಗತಿಗೂ ಕೊಡುಗೆ ನೀಡಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಸವದತ್ತಿ ಶಾಸಕರಾದ ವಿಶ್ವಾಸ ವೈದ್ಯರವರು, ಅಲ್ಲಮಪ್ರಭುರವರು, ಚಂದ್ರು ಶ್ಯಾನರಾಯನವರು, ಎಂ. ಕೆ. ಬೇವೂರವರು, ಬಸವರಾಜ ಆಯಟ್ಟಿರವರು, ಸವದತ್ತಿ ನಗರ ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಶ್ರೀಮತಿ ವನಜಾಕ್ಷಿರವರು ಹಾಗೂ ಕಾರ್ಯದರ್ಶಿಗಳಾದ ರೂಪಾ ಕೂಡಲಗಿಮಠರವರು ಸೇರಿದಂತೆ ಇನ್ನಿತರ ಗಣ್ಯರು ಉಪಸ್ಥಿತರಿದ್ದರು.

ಅಲ್ತಾಫ್ ಎಂ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ

Tags:

error: Content is protected !!