Belagavi

ಮಟಕಾ ಅಡ್ಡೆಗಳ ಮೇಲೆ ದಾಳಿ; ಇಬ್ಬರ ಬಂಧನ!!!

Share

ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಅಕ್ರಮವಾಗಿ ನಡೆಯುತ್ತಿದ್ದ ಮಟಕ ಜುಗಾರಿ ಅಡ್ಡೆಗಳ ಮೇಲೆ ಪೊಲೀಸರು ದಾಳಿ ನಡೆಸಿದ್ದಾರೆ. ಯಳ್ಳೂರ ಹಾಗೂ ಹಿಂಡಲಗಾ ಗ್ರಾಮಗಳಲ್ಲಿ ಸಾರ್ವಜನಿಕ ಸ್ಥಳದಲ್ಲಿ ಮಟಕ ಆಡಿಸುತ್ತಿದ್ದ ಇಬ್ಬರನ್ನು ವಶಕ್ಕೆ ಪಡೆದುಕೊಂಡಿರುವ ಪೊಲೀಸರು, ಅವರಿಂದ ನಗದು ಹಾಗೂ ಜುಗಾರಿ ಸಾಮಾಗ್ರಿಗಳನ್ನು ಜಪ್ತಿ ಮಾಡಿದ್ದಾರೆ.

ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯ ಪಿಎಸ್‌ಐಗಳಾದ ಸಂತೋಷ ದಳವಾಯಿ ಹಾಗೂ ಬಿ.ಡಿ. ಸರನಾಯ್ಕ್ ನೇತೃತ್ವದ ಪೊಲೀಸರು ಮೇಲಾಧಿಕಾರಿಗಳ ಮಾರ್ಗದರ್ಶನದಲ್ಲಿ ಪ್ರತ್ಯೇಕ ಕಾರ್ಯಾಚರಣೆಗಳನ್ನು ನಡೆಸಿದ್ದಾರೆ. ಸಾರ್ವಜನಿಕ ಸ್ಥಳಗಳಲ್ಲಿ ತಮ್ಮ ಸ್ವಂತ ಫಾಯ್ದೆಗಾಗಿ ಅಂಕ ಸಂಖ್ಯೆಗಳ ಮೇಲೆ ಹಣ ಹಚ್ಚಿಕೊಂಡು ಅಕ್ರಮವಾಗಿ ಮಟಕ ಆಟವಾಡುತ್ತಿದ್ದ ನಾಗೇಶ ಮಾರುತಿ ಭೋಗಲೆ ಮತ್ತು ಶ್ಯಾಮು ಬಬನದಾಸ ಗುಲಬಾನಿ ಎಂಬಿಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ. ದಾಳಿಯ ವೇಳೆ ಆರೋಪಿಗಳಿಂದ ಒಟ್ಟು ರೂ. 7,700/- ನಗದು ಹಾಗೂ ಒಸಿ ಚೀಟಿಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಬೆಳಗಾವಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಪ್ರಕರಣಗಳನ್ನು ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ. ಈ ಯಶಸ್ವಿ ಕಾರ್ಯಾಚರಣೆ ಕೈಗೊಂಡ ಪಿಎಸ್‌ಐಗಳು ಹಾಗೂ ಸಿಬ್ಬಂದಿಯ ಕಾರ್ಯವನ್ನು ಪೊಲೀಸ್ ಆಯುಕ್ತರು ಮತ್ತು ಡಿಸಿಪಿ ಶ್ಲಾಘಿಸಿದ್ದಾರೆ.

Tags:

error: Content is protected !!