ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಹೊನವಾಡ ಗ್ರಾಮದ ವಾರ್ಡ್ ನಂ. 2ರ ಆಡಿಕಟ್ಟಿ ಓಣಿಯಲ್ಲಿ ಚರಂಡಿ ನೀರು ಪ್ರತಿದಿನ ರಸ್ತೆಗೆ ಹರಿಯುತ್ತಿದ್ದು, ನಿವಾಸಿಗಳು ಹಾಗೂ ವಿದ್ಯಾರ್ಥಿಗಳು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.
ಚರಂಡಿ ಹೂಳು ಮತ್ತು ತ್ಯಾಜ್ಯದಿಂದ ತುಂಬಿರು ವುದರಿಂದ ದುರ್ವಾಸನೆ ಹಾಗೂ ಸೊಳ್ಳೆಗಳ ಕಾಟ ಹೆಚ್ಚಾಗಿದೆ. ಇದರಿಂದ ಸಾರ್ವಜನಿಕರ ಆರೋಗ್ಯಕ್ಕೂ ಧಕ್ಕೆ ಉಂಟಾಗುವ ಆತಂಕ ಎದುರಾಗಿದೆ. ಹಲವು ಬಾರಿ ಅಧಿಕಾರಿಗಳ ಗಮನಕ್ಕೆ ತಂದರೂ ಸಮಸ್ಯೆಗೆ ಶಾಶ್ವತ ಪರಿಹಾರ ದೊರೆತಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಕೂಡಲೇ ಚರಂಡಿ ಸ್ವಚ್ಛಗೊಳಿಸಿ, ದುರಸ್ತಿಪಡಿಸುವ ಮೂಲಕ ಸಮಸ್ಯೆಗೆ ಶಾಶ್ವತ ಪರಿಹಾರ ಕಲ್ಪಿಸಬೇಕು ಎಂದು ನಿವಾಸಿಗಳು ಆಗ್ರಹಿಸಿದ್ದಾರೆ.
Vijaypura
ಚರಂಡಿ ನೀರು ರಸ್ತೆಗೆ; ಸಮಸ್ಯೆ ಪರಿಹರಿಸುವಂತೆ ನಿವಾಸಿಗಳ ಆಕ್ರೋಶ
