ವಿಜಯಪುರ ಜಿಲ್ಲೆಯ ಬಸವನ ಬಾಗೇವಾಡಿ: ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿ ಕೆಲವು ಔಷಧಗಳು ಲಭ್ಯವಿಲ್ಲದೆ ಬಡ ರೋಗಿಗಳು ಹೊರಗಡೆ ನೂರಾರು ರೂಪಾಯಿ ನೀಡಿ ಔಷಧ ಖರೀದಿಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಸರ್ಕಾರಿ ಆಸ್ಪತ್ರೆಗಳಲ್ಲಿ ಎಲ್ಲ ಔಷಧಗಳನ್ನು ಉಚಿತವಾಗಿ ನೀಡಲಾಗುವುದು ಎಂಬ ಸರ್ಕಾರದ ಹೇಳಿಕೆಗೆ ವಿರುದ್ಧವಾಗಿ ಈ ಸ್ಥಿತಿ ಕಂಡುಬಂದಿದೆ. ಔಷಧಗಳ ಕೊರತೆಗೆ ಕಾರಣವೇನು ಎಂಬುದನ್ನು ಜಿಲ್ಲಾ ಆರೋಗ್ಯ ಇಲಾಖೆ ಸ್ಪಷ್ಟಪಡಿಸಬೇಕು ಹಾಗೂ ತಕ್ಷಣ ಅಗತ್ಯ ಔಷಧಗಳನ್ನು ಪೂರೈಸಿ ಬಡ ರೋಗಿಗಳಿಗೆ ಆಗುತ್ತಿರುವ ಆರ್ಥಿಕ ಹೊರೆಯನ್ನು ತಪ್ಪಿಸಬೇಕು ಎಂದು ಕರ್ನಾಟಕ ರೈತ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಅರವಿಂದ ಕುಲಕರ್ಣಿ ಆಗ್ರಹಿಸಿದ್ದಾರೆ.
