Khanapur

ಪಾರಿಶ್ವಾಡ ಶ್ರೀ ಲಕ್ಷ್ಮೀ ದೇವಿ ಚೌಕಟ್ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಶಾಸಕ ವಿಠ್ಠಲ ಹಲಗೇಕರ

Share

ಖಾನಾಪೂರ ತಾಲೂಕಿನ ಪಾರಿಶ್ವಾಡ ಗ್ರಾಮದಲ್ಲಿ ನಡೆದ ಶ್ರೀ ಲಕ್ಷ್ಮೀ ದೇವಿ ಚೌಕಟ್ ಪೂಜಾ ಕಾರ್ಯಕ್ರಮದಲ್ಲಿ ಶಾಸಕ ವಿಠ್ಠಲ ಹಲಗೇಕರ ಅವರು ಭಾಗವಹಿಸಿ ದೇವಿಯ ಆಶೀರ್ವಾದ ಪಡೆದುಕೊಂಡರು.

ಈ ಸಂದರ್ಭದಲ್ಲಿ ಅವರು ನಾಡಿನ ಜನತೆಗೆ ಸುಖ, ಶಾಂತಿ, ಸಮೃದ್ಧಿ ಹಾಗೂ ರೈತ ಬಾಂಧವರಿಗೆ ಉತ್ತಮ ಮಳೆ-ಬೆಳೆ ದೊರೆಯಲಿ ಎಂದು ಶ್ರೀ ಲಕ್ಷ್ಮೀ ದೇವಿಯಲ್ಲಿ ಪ್ರಾರ್ಥಿಸಿದರು

ನಂತರ ಮಾತನಾಡಿದ ಅವರು ನಮ್ಮ ನಾಡಿನ ಧಾರ್ಮಿಕ ಪರಂಪರೆ, ಸಂಸ್ಕೃತಿ ಮತ್ತು ಸಂಪ್ರದಾಯಗಳನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಕರ್ತವ್ಯವಾಗಿದೆ ಎಂದರು

ಈ ಸಂದರ್ಭದಲ್ಲಿ ಶ್ರೀ ಲಕ್ಷ್ಮೀ ದೇವಿಯ ಬಹು ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು .

ಅಲ್ತಾಫ್ ಎಂ ಬಸರೀಕಟ್ಟಿ
ಇನ್ ನ್ಯೂಸ್ ಖಾನಾಪೂರ

Tags:

error: Content is protected !!