ಖಾನಾಪೂರ ತಾಲೂಕಿನಲ್ಲಿ ಭೀಕರ ರಸ್ತೆ ಅಪಘಾತವೊಂದು ಸಂಭವಿಸಿದ್ದು, ವೇಗವಾಗಿ ಬಂದ ಸಾರಿಗೆ ಬಸ್ ಡಿಕ್ಕಿಯಾಗಿ ಸೈಕಲ್ ಸವಾರ ವೃದ್ಧರೊಬ್ಬರು ಸ್ಥಳದಲ್ಲೇ ಪ್ರಾಣ ಕಳೆದುಕೊಂಡಿದ್ದಾರೆ. ಖಾನಾಪೂರ–ತಾಳಗುಪ್ಪ ರಾಜ್ಯ ಹೆದ್ದಾರಿಯ ಬಾಳಗುಂದ-ಬೀಡಿ ರಸ್ತೆಯಲ್ಲಿ ಈ ದುರಂತ ಸಂಭವಿಸಿದೆ.
ಖಾನಾಪೂರ ತಾಲೂಕಿನ ಝಂಜವಾಡ ಕೆ.ಎನ್. ಗ್ರಾಮದ ಬಳಿ ಸಾರಿಗೆ ಸಂಸ್ಥೆಯ ಬಸ್ ಸೈಕಲ್ಗೆ ಡಿಕ್ಕಿ ಹೊಡೆದ ಪರಿಣಾಮ 75 ವರ್ಷದ ಬಾಬಾಸಾಬ ನಬಿಸಾಬ ದೇಶಪಾಯಿಕ್ ಎಂಬುವವರು ತಲೆ ಮತ್ತು ಮುಖಕ್ಕೆ ತೀವ್ರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೇಕವಾಡದಿಂದ ನಂದಗಡಕ್ಕೆ ತೆರಳುತ್ತಿದ್ದ ಯಲ್ಲಾಪುರ ಘಟಕದ ಸಾರಿಗೆ ಬಸ್ (KA 31 F 1611) ಚಾಲಕ ಮಂಜುನಾಥ ಕಾಂಬಳೆ ಎಂಬುವವರು ಅತಿವೇಗ ಹಾಗೂ ನಿರ್ಲಕ್ಷ್ಯದಿಂದ ಚಾಲನೆ ಮಾಡಿದ್ದೇ ಅಪಘಾತಕ್ಕೆ ಕಾರಣ ಎನ್ನಲಾಗಿದೆ. ಘಟನೆಗೆ ಸಂಬಂಧಿಸಿದಂತೆ ನಂದಗಡ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆಯಡಿ ಪ್ರಕರಣ ದಾಖಲಾಗಿದ್ದು, ಇನ್ಸ್ಪೆಕ್ಟರ್ ರವಿಕುಮಾರ್ ಧರ್ಮಟ್ಟಿ ಅವರ ನೇತೃತ್ವದಲ್ಲಿ ತನಿಖೆ ಮುಂದುವರಿದಿದೆ.
Accident
ಖಾನಾಪೂರ: ಸಾರಿಗೆ ಬಸ್ ಡಿಕ್ಕಿಯಾಗಿ ಸೈಕಲ್ ಸವಾರ ವೃದ್ಧ ಸ್ಥಳದಲ್ಲೇ ಸಾವು
