ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವವನ್ನು ಅದ್ದೂರಿಯಾಗಿ ಮತ್ತು ಅರ್ಥಪೂರ್ಣವಾಗಿ ಆಚರಿಸಲು ನಿರ್ಧರಿಸಲಾಗಿದ್ದು, ಇಲಾಖೆ ಅಧಿಕಾರಿಗಳು ಅಗತ್ಯ ಸಿದ್ಧತೆ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಸ್ನೇಹಲ್ ಆರ್. ಅವರು ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ನೂತನ ಸಭಾಂಗಣದಲ್ಲಿ ಜರುಗಿದ ಪ್ರಸಕ್ತ ಸಾಲಿನ ಕರ್ನಾಟಕ ರಾಜ್ಯೋತ್ಸವದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ಅವರು, ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವು ಜಿಲ್ಲೆಯಲ್ಲಿ ಜರುಗಿರುವ ಕನ್ನಡ ಹೋರಾಟ, ನಾಡಿನ ಏಕೀಕರಣ ಚಳುವಳಿಗಳ ಹಿನ್ನಲೆಯಲ್ಲಿ ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಇತಿಹಾಸ ತಿಳಿಸುವ ಕೆಲಸವಾಗಬೇಕು. ಈ ನಿಟ್ಟಿನಲ್ಲಿ ಸಾಂಸ್ಕøತಿಕವಾಗಿ ಕಾರ್ಯಕ್ರಮಗಳನ್ನು ಆಯೋಜಿಸಬೇಕು. ಶಾಲಾ ಶಿಕ್ಷಣ ಇಲಾಖೆ ಮತ್ತು ಪದವಿ ಪೂರ್ವ ಶಿಕ್ಷಣ ಇಲಾಖೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತವಾಗಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು ಎಂದು ಅವರು ತಿಳಿಸಿದರು.
ಪ್ರತಿ ವರ್ಷದಂತೆ ರಾಜ್ಯೋತ್ಸವವನ್ನು ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದಲ್ಲಿ ಆಯೋಜಿಸಲಾಗುತ್ತದೆ. ಎಲ್ಲ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಕಡ್ಡಾಯವಾಗಿ ಕಾರ್ಯಕ್ರಮದಲ್ಲಿ ಭಾಗವಹಿಸಬೇಕು. ಶಿಕ್ಷಣ ಇಲಾಖೆಯ ಅಧಿಕಾರಿಗಳು ಶಾಲಾ ಮಕ್ಕಳನ್ನು ಮತ್ತು ಸಮಾಜ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ವಸತಿ ನಿಲಯಗಳ ವಿದ್ಯಾರ್ಥಿಗಳೊಂದಿಗೆ ಕಾರ್ಯಕ್ರಮಕ್ಕೆ ಹಾಜರಾಗಬೇಕೆಂದು ಅವರು ಸೂಚಿಸಿದರು.
ಪೊಲೀಸ್ ಪಡೆ, ಜಿಲ್ಲಾ ಮೀಸಲು ಪೊಲೀಸ್ ಪಡೆ, ಜಿಲ್ಲಾ ಗೃಹರಕ್ಷಕ ದಳ, ಅರಣ್ಯ ಇಲಾಖೆ, ಅಗ್ನಿಶಾಮಕ ದಳ, ಎನ್.ಸಿ.ಸಿ. ವಿದ್ಯಾರ್ಥಿಗಳು, ಭಾರತ ಸೇವಾದಳ ಮತ್ತು ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿಗಳು ಕವಾಯತ್ದಲ್ಲಿ ಪಾಲ್ಗೊಂಡು ಉತ್ತಮ ರೀತಿಯಲ್ಲಿ ಪ್ರದರ್ಶನ ನೀಡುವಂತೆ ಪೆÇಲೀಸ್ ಇಲಾಖೆ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಅವರು ಹೇಳಿದರು.
ಜಿಲ್ಲಾ ಕ್ರೀಡಾಂಗಣದಲ್ಲಿ ಕ್ರೀಡಾ ಇಲಾಖೆಯು ವಿದ್ಯಾರ್ಥಿಗಳಿಗೆ ಮತ್ತು ಸಾರ್ವಜನಿಕರಿಗೆ ಅನುಕೂಲವಾಗುವಂತೆ ಗ್ಯಾಲರಿ ವ್ಯವಸ್ಥೆ ಮಾಡಬೇಕು. ಮಹಾನಗರ ಪಾಲಿಕೆಯಿಂದ ಶೌಚಾಲಯಗಳ ವ್ಯವಸ್ಥೆಯನ್ನು ಮಾಡಬೇಕು. ರಾಜ್ಯೋತ್ಸವದ ಮುನ್ನ ದಿನ ಪ್ರಮುಖ ಸರ್ಕಾರಿ ಕಟ್ಟಡಗಳನ್ನು ದೀಪಾಲಂಕರ ಮಾಡಬೇಕು.
ಲೋಕೋಪಯೋಗಿ ಇಲಾಖೆಯಿಂದ ಸುಂದರವಾದ ವೇದಿಕೆಯನ್ನು ಸಿದ್ಧಗೊಳಿಸಬೇಕು ಎಂದು ಅವರು ಹೇಳಿದರು.
ಎಲ್ಲ ಇಲಾಖೆಗಳು ತಮ್ಮ ಅದೀನದಲ್ಲಿ ಅನುμÁ್ಠನಗೊಂಡಿರುವ ಪ್ರಮುಖ ಕಾರ್ಯಕ್ರಮ ಮತ್ತು ಯೋಜನೆಗಳ ಕುರಿತು ಸಂಕ್ಷಿಪ್ತ ವರದಿಯನ್ನು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳಿಗೆ ಸಲ್ಲಿಸಬೇಕು. ಅವರು ಸಚಿವರ ರಾಜ್ಯೋತ್ಸವದ ಸಂದೇಶವನ್ನು ರೂಪಿಸಬೇಕು ಎಂದು ಜಿಲ್ಲಾಧಿಕಾರಿಗಳು ತಿಳಿಸಿದರು.
ಕಾರ್ಯಕ್ರಮ ಸ್ಥಳದಲ್ಲಿ ಅಗತ್ಯ ಕುಡಿಯುವ ನೀರು, ಶೌಚಾಲಯ ಮತ್ತು ವಿದ್ಯಾರ್ಥಿಗಳಿಗೆ ಅಲ್ಫೋಪಹಾರ ವ್ಯವಸ್ಥೆಯನ್ನು ಮಾಡಬೇಕು. ಆರೋಗ್ಯ ಇಲಾಖೆಯಿಂದ ಸಿಬ್ಬಂದಿಗಳನ್ನು ನೇಮಿಸಬೇಕು. ಯಾವುದೇ ರೀತಿಯ ತೊಂದರೆ ಆಗದಂತೆ ವ್ಯವಸ್ಥಿತವಾಗಿ ಕಾರ್ಯಕ್ರಮವನ್ನು ರೂಪಿಸಬೇಕೆಂದು ಜಿಲ್ಲಾಧಿಕಾರಿಗಳು ಅಧಿಕಾರಿಗಳಿಗೆ ನಿರ್ದೇಶಿಸಿದರು.
ಇಂದಿನ ಸಭೆಗೆ ಕೆಲವು ಇಲಾಖೆ ಅಧಿಕಾರಿಗಳು ಪೂರ್ವಾನುಮತಿ ಪಡೆಯದೆ ಗೈರಾಗಿದ್ದಾರೆ ಮತ್ತು ಕೆಲವು ಇಲಾಖೆ ಅಧಿಕಾರಿಗಳು ತಮ್ಮ ಬದಲಿಗೆ ಪ್ರತಿನಿಧಿಗಳನ್ನು ಕಳುಹಿಸಿದ್ದಾರೆ. ಅವರಿಗೆ ಎಚ್ಚರಿಕೆ ನೋಟಿಸ್ ನೀಡಲು ಜಿಲ್ಲಾಧಿಕಾರಿಗಳು ಸೂಚಿಸಿದರು.
ವೇದಿಕೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಧಿಕಾರಿ ಗುಂಜನ್ ಆರ್ಯ, ಡಿಸಿಪಿ ಶೃತಿ ಎನ್.ಎಸ್. ಇದ್ದರು.
ಸಭೆಯಲ್ಲಿ ಸಹಾಯಕ ಪೆÇಲೀಸ್ ಆಯುಕ್ತ ಪ್ರಶಾಂತ್ ಸಿದ್ದನಗೌಡ, ಉಪವಿಭಾಗಾಧಿಕಾರಿ ಪ್ರಭಾವತಿ ಫಕೀರಪುರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ವೀರಣ್ಣಗೌಡ ಪಾಟೀಲ, ಜಿಲ್ಲಾ ಅರೋಗ್ಯಾಧಿಕಾರಿ ಡಾ. ಪರಶುರಾಮ ಎಫ್.ಕೆ., ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಸದಾನಂದ ಹೆಚ್. ಅಮರಾಪೂರ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ, ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಕೆ.ಸಿ. ಭದ್ರಣ್ಣವರ ಸೇರಿದಂತೆ ವಿವಿಧ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.
