Vijaypura

ಕಾರು–ಬೈಕ್ ಡಿಕ್ಕಿ: ಎರಡು ವರ್ಷದ ಮಗು ಸಾವು, ಇಬ್ಬರಿಗೆ ಗಂಭೀರ ಗಾಯ

Share

ಕಾರು ಹಾಗೂ ಬೈಕ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಎರಡು ವರ್ಷದ ಮಗು ಸ್ಥಳದಲ್ಲೇ ಮೃತಪಟ್ಟಿದ್ದು, ಇಬ್ಬರು ಮಹಿಳೆಯರು ಗಂಭೀರವಾಗಿ ಗಾಯಗೊಂಡ ಘಟನೆ ವಿಜಯಪುರ ಜಿಲ್ಲೆಯ ಕೋಲ್ಹಾರ ತಾಲೂಕಿನ ಮುತ್ತಗಿ ಕ್ರಾಸ್ ಬಳಿ ನಡೆದಿದೆ. ಅಪಘಾತದಲ್ಲಿ ರಾವುತ ರವಿ ಹರಿಜನ್ (2) ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ. ರೇಣುಕಾ ಹಾಗೂ ಯಮನವ್ವ ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ತಕ್ಷಣ ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೂಡಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags:

error: Content is protected !!