ಬೆಳಗಾವಿ ಉತ್ತರ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರ ಜನ್ಮದಿನವನ್ನು ಅಭಿಮಾನಿಗಳು ಹಾಗೂ ಪಕ್ಷದ ಮುಖಂಡರು ಸಡಗರದಿಂದ ಆಚರಿಸಿದ್ದಾರೆ. ಈ ಶುಭ ಸಂದರ್ಭದಲ್ಲಿ ಕಾಂಗ್ರೆಸ್ ಯುವ ನಾಯಕ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಹುಲ್ ಜಾರಕಿಹೊಳಿ ಅವರು ನೇರವಾಗಿ ಭೇಟಿ ನೀಡಿ ಶುಭಹಾರೈಸಿದ್ದಾರೆ.
ಬೆಳಗಾವಿ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಆಸೀಫ್ ಸೇಠ್ ಅವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಯುವ ನಾಯಕ, ಡಿಸಿಸಿ ಬ್ಯಾಂಕ್ ನಿರ್ದೇಶಕ ರಾಹುಲ್ ಜಾರಕಿಹೊಳಿ ಅವರು ಶಾಸಕರನ್ನು ಭೇಟಿಯಾಗಿ ಸನ್ಮಾನಿಸಿದರು. ಶಾಸಕರಿಗೆ ಹೂಗುಚ್ಛ ನೀಡಿ ಗೌರವಿಸಿದ ರಾಹುಲ್ ಜಾರಕಿಹೊಳಿ, ಅವರಿಗೆ ಆಯುಷ್ಯ ಮತ್ತು ಆರೋಗ್ಯವನ್ನು ಕೋರಿ ಹುಟ್ಟುಹಬ್ಬದ ಶುಭಾಶಯಗಳನ್ನು ತಿಳಿಸಿದರು. ಈ ವಿಶೇಷ ಸಂದರ್ಭದಲ್ಲಿ ಯುವ ನಾಯಕ ಅಮಾನ್ ಸೇಠ್ ಸೇರಿದಂತೆ ಪ್ರಮುಖ ನಾಯಕರು, ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಉಪಸ್ಥಿತರಿದ್ದು, ಶಾಸಕರಿಗೆ ಜನ್ಮದಿನದ ಶುಭಕೋರಿದರು.
