ಹುಬ್ಬಳ್ಳಿಯಲ್ಲಿ ಗಾಳಿಪಟದ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ದಾರುಣ ಘಟನೆ ನಡೆದಿದೆ. ಸ್ಕೂಟಿಯಲ್ಲಿ ಪ್ರಯಾಣಿಸುತ್ತಿದ್ದ ಮಹಿಳೆಯ ಕುತ್ತಿಗೆಗೆ ಗಾಳಿಪಟದ ಮಾಂಜಾ ದಾರ ಸಿಲುಕಿಕೊಂಡ ಪರಿಣಾಮ ಗಂಭೀರ ಗಾಯಗಳಾಗಿ, ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಹಳೇ ಹುಬ್ಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಸಿದ್ಧಾರೂಢ ಮಠದ ಬಳಿ ಈ ದುರ್ಘಟನೆ ಸಂಭವಿಸಿದೆ. ಗಾಳಿಪಟ ಹಾರಿಸಲು ಬಳಸುವ ಅಪಾಯಕಾರಿ ಮಾಂಜಾ ದಾರದಿಂದಾಗಿ ಮಹಿಳೆಯೊಬ್ಬರು ಮೃತಪಟ್ಟಿರುವುದು ಸಾರ್ವಜನಿಕರಲ್ಲಿ ಆತಂಕ ಮೂಡಿಸಿದೆ.
ವಾಹನ ಸವಾರರು ರಸ್ತೆಯಲ್ಲಿ ಸಂಚರಿಸುವಾಗ ಎಚ್ಚರಿಕೆ ವಹಿಸಬೇಕಾದ ಅನಿವಾರ್ಯತೆ ಎದುರಾಗಿದೆ. ನಿಷೇಧಿತ ಹಾಗೂ ಅಪಾಯಕಾರಿ ಮಾಂಜಾ ದಾರದ ಬಳಕೆಗೆ ಕಡಿವಾಣ ಹಾಕಬೇಕೆಂಬ ಆಗ್ರಹವೂ ಕೇಳಿಬರುತ್ತಿದೆ.
