ಅ. 26ರಂದು ಹಲಗಾದ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರೊಂದಿಗೆ ನಡೆಯಲಿರುವ ಕಬ್ಬಿನ ದರ ನಿಗದಿ ಸಭೆಯಲ್ಲಿ ಕಬ್ಬಿನ ದರವನ್ನು ಅಂತಿಮಗೊಳಿಸಲೇಬೇಕು ಎಂದು ರೈತ ಸಂಘಟನೆ ಆಗ್ರಹಿಸಿದೆ.
ಈ ಹಿನ್ನೆಲೆಯಲ್ಲಿ ರೈತ ಸಂಘಟನೆಯ ಮುಖಂಡರು ಶುಕ್ರವಾರ ಜಿಲ್ಲಾಧಿಕಾರಿ ಕಚೇರಿಗೆ ಭೇಟಿ ನೀಡಿ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಲು ಆಗಮಿಸಿದ್ದರು. ಆದರೆ, ಜಿಲ್ಲಾಧಿಕಾರಿಗಳು ಕಿತ್ತೂರು ಉತ್ಸವದ ಕಾರ್ಯಗಳಲ್ಲಿ ನಿರತರಾಗಿದ್ದರಿಂದ ಭೇಟಿಗೆ ಸಾಧ್ಯವಾಗಲಿಲ್ಲ. ಬಳಿಕ ರೈತ ಮುಖಂಡರು ಪತ್ರಕರ್ತರೊಂದಿಗೆ ಮಾತನಾಡಿ ತಮ್ಮ ಬೇಡಿಕೆಗಳನ್ನು ತಿಳಿಸಿ ಜಿಲ್ಲಾಧಿಕಾರಿ ಕಚೇರಿಯಿಂದ ತೆರಳಿದರು.
ಅ. 26ರಂದು ನಡೆಯಲಿರುವ ಸಭೆಯಲ್ಲಿ ಕಬ್ಬಿನ ದರದ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಬೇಕು. ರೈತರಿಗೆ ನ್ಯಾಯಯುತ ದರ ದೊರೆಯುವ ನಿಟ್ಟಿನಲ್ಲಿ ಸರ್ಕಾರ ಸ್ಪಷ್ಟ ನಿಲುವು ಪ್ರಕಟಿಸಬೇಕು ಎಂದು ರೈತ ಮುಖಂಡರು ಒತ್ತಾಯಿಸಿದರು.
ಈ ವೇಳೆ ರೈತ ಮುಖಂಡ ಸಂದೀಪ್ ಚಲವಾದಿ ಇನ್ನುಳಿದವರು ಉಪಸ್ಥಿತರಿದ್ದರು.
