hubbali

ಹಳೇ ಹುಬ್ಬಳ್ಳಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ಇಬ್ಬರು ಮನೆಗಳ್ಳರು ಕಂಬಿ ಹಿಂದೆ

Share

ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆ ಪೊಲೀಸರು ಭರ್ಜರಿ ಕಾರ್ಯಾಚರಣೆ ನಡೆಸಿ ಇಬ್ಬರು ಮನೆಗಳ್ಳರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಬಂಧಿತರಿಂದ ಒಟ್ಟು 3,45,000 ಮೌಲ್ಯದ ಬಂಗಾರ, ಬೆಳ್ಳಿಯ ಒಡವೆಗಳು ಹಾಗೂ ಮೊಬೈಲ್‌ ವಶಕ್ಕೆ ಪಡೆದಿದ್ದಾರೆ.

ಇತ್ತೀಚೆಗೆ ಹಳೇಹುಬ್ಬಳ್ಳಿ ಠಾಣಾ ವ್ಯಾಪ್ತಿಯ ಹಳೇ ಹುಬ್ಬಳ್ಳಿ ಆನಂದನಗರ ಮರಿಯಮ್ಮ ದೇವಸ್ಥಾನದ ಹತ್ತಿರ ಮನೆಯ ಕೀಲಿ ಮುರಿದು ಒಳ ನುಗ್ಗಿ ಕಳ್ಳತನ ಮಾಡಿದ ಬಗ್ಗೆ ಹಳೇ ಹುಬ್ಬಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಪ್ರಕರಣ ಬೆನ್ನಟ್ಟಿದ ಪೊಲೀಸರು ಶ್ರೀಕಾಂತ ಸಿದ್ದಪ್ಪ ಕರಗುಪ್ಪಿ (36) ಹಾಗೂ ಪ್ರವೀಣ ಯಲ್ಲಪ್ಪ ಅಂಗಡಿ (36) ಎಂಬ ಇಬ್ಬರು ಮನೆಗಳ್ಳರನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತರಿಂದ 3,45,000 ರೂಪಾಯಿ ಮೌಲ್ಯದ ಬಂಗಾರ, ಬೆಳ್ಳಿಯ ಒಡವೆಗಳು ಹಾಗೂ ಮೊಬೈಲ್‌ ವಶಪಡಿಸಿಕೊಂಡು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

Tags:

error: Content is protected !!