SIR ಪ್ರಕ್ರಿಯೆಯನ್ನು ವಿರೋಧಿಸಿ ವಿಜಯಪುರದಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಯಿತು.
ನಗರದ ಸಿದ್ದೇಶ್ವರ ದೇವಸ್ಥಾನದಿಂದ ಆರಂಭವಾದ ಮೆರವಣಿಗೆ ಅಂಬೇಡ್ಕರ್ ವೃತ್ತದವರೆಗೆ ಸಾಗಿತು. ಪ್ರಜಾಪ್ರಭುತ್ವ ಉಳಿಸಿ ಆಂದೋಲನದ ಅಂಗವಾಗಿ ಆಯೋಜಿಸಲಾದ ಈ ಮೆರವಣಿಗೆಯಲ್ಲಿ ವಿವಿಧ ಸಂಘಟನೆಗಳ ಮುಖಂಡರು ಹಾಗೂ ಕಾರ್ಯಕರ್ತರು ಪಾಲ್ಗೊಂಡು SIR ಪ್ರಕ್ರಿಯೆಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ವಜಾಗೊಳಿಸಬೇಕು ಹಾಗೂ SIR ಪ್ರಕ್ರಿಯೆಯನ್ನು ಸಂಪೂರ್ಣವಾಗಿ ರದ್ದುಗೊಳಿಸಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
Vijaypura
SIR ಪ್ರಕ್ರಿಯೆ ವಿರುದ್ಧ ವಿಜಯಪುರದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ!
