Chikkodi

ಗುರ್ಲಾಪುರದಲ್ಲಿ ತೀವ್ರಗೊಂಡ ೨ ನೇ ದಿನದ ರೈತರ ಹೋರಾಟ: ಕಬ್ಬಿಗೆ ೫,೫೦೦ ರೂ. ದರಕ್ಕೆ ಪಟ್ಟು

Share

ಗುರ್ಲಾಪೂರದಲ್ಲಿ ಕಬ್ಬು ಬೆಳೆಗಾರರು ಎದುರಿಸುತ್ತಿರುವ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗುರ್ಲಾಪುರದಲ್ಲಿ ಆರಂಭವಾಗಿರುವ ರೈತರ ಹೋರಾಟವು ೨ ನೇ ದಿನಕ್ಕೆ ಕಾಲಿಟ್ಟಿದ್ದು, ತೀವ್ರ ಸ್ವರೂಪ ಪಡೆದುಕೊಂಡಿದೆ.

ರೈತ ಮುಖಂಡರಾದ ಚುನ್ನಪ್ಪ ಪೂಜೇರಿ ಹಾಗೂ ಶಶಿಕಾಂತ ಗುರೂಜಿ ಅವರ ನೇತೃತ್ವದಲ್ಲಿ ಇಷ್ಟೊಂದು ಬೃಹತ್ ಮಟ್ಟದ ಹೋರಾಟ ಸಂಘಟಿತವಾಗಿದ್ದು, ಸಾವಿರಾರು ಸಂಖ್ಯೆಯಲ್ಲಿ ರೈತರು ಭಾಗವಹಿಸಿ ತಮ್ಮ ಆಕ್ರೋಶ ಹೊರಹಾಕಿದ್ದಾರೆ.

ಪ್ರತಿ ಟನ್ ಕಬ್ಬಿಗೆ ಕನಿಷ್ಠ ₹ ೫,೫೦೦ ದರವನ್ನು ತಕ್ಷಣವೇ ನಿಗದಿಪಡಿಸಬೇಕು.ಕನಿಷ್ಠ ಬೆಂಬಲ ಬೆಲೆಯನ್ನು ಬೆಲೆ ಏರಿಕೆಗೆ ತಕ್ಕಂತೆ ಹೆಚ್ಚಿಸಬೇಕು.
ಕಬ್ಬು ಬೆಳೆಗಾರರಿಗೆ ಸರ್ಕಾರದಿಂದಲೇ ಪ್ರತಿ ಟನ್‌ಗೆ ₹ ೧,೦೦೦ ಪ್ರೋತ್ಸಾಹ ಧನ ಬಿಡುಗಡೆ ಮಾಡಬೇಕು ಸೇರಿದಂತೆ ವಿವಿಧ ಬೇಡಿಕೆಯನ್ನು ಇಟ್ಟು ಪ್ರತಿಭಟನೆ ಮಾಡುತ್ತಿದ್ದಾರೆ.

ಇಂದು ನಡೆದ ಬೃಹತ್ ಪ್ರತಿಭಟನಾ ಸಭೆಯಲ್ಲಿ ಭಾಗವಹಿಸಿದ್ದ ಸಾವಿರಾರು ರೈತರು, “ಕಬ್ಬಿಗೆ ಯೋಗ್ಯ ಹಾಗೂ ನ್ಯಾಯಯುತ ದರ ನಿಗದಿಯಾಗುವವರೆಗೂ ಹೋರಾಟದಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ” ಎಂದು ಒಮ್ಮತದಿಂದ ಪಟ್ಟು ಹಿಡಿದಿದ್ದಾರೆ. ಸೂಕ್ತ ದರ ಸಿಗದೆ ಕಬ್ಬು ಸರಬರಾಜು ಮಾಡುವುದಿಲ್ಲ ಎಂದು ಬೆಳೆಗಾರರು ಎಚ್ಚರಿಸಿದ್ದಾರೆ.

ಇನ್ನೊಂದೆಡೆ, ಗುರ್ಲಾಪುರದಲ್ಲಿ ರೈತರ ಹೋರಾಟ ಕಾವೇರುತ್ತಿದ್ದಂತೆಯೇ ಅತ್ತ ಬೆಳಗಾವಿಯಲ್ಲಿ ಮುಖ್ಯಮಂತ್ರಿಗಳು ಕಬ್ಬು ಕಾರ್ಖಾನೆ ಮಾಲೀಕರೊಂದಿಗೆ ಪ್ರಮುಖ ಸಭೆ ನಡೆಸುತ್ತಿದ್ದಾರೆ. ಕಬ್ಬಿನ ದರ ನಿಗದಿ ಹಾಗೂ ರೈತರ ಬೇಡಿಕೆಗಳ ಕುರಿತು ಈ ಸಭೆಯಲ್ಲಿ ನಿರ್ಣಾಯಕ ತೀರ್ಮಾನ ಹೊರಬೀಳಲಿದೆಯೇ ಎಂಬುದನ್ನು ಇಡೀ ರೈತ ಸಮುದಾಯ ಉಸಿರು ಬಿಗಿಹಿಡಿದು ಕಾಯುತ್ತಿದೆ.
ಸಭಾ ನಿರ್ಧಾರದ ಆಧಾರದ ಮೇಲೆ ಮುಂದಿನ ಹೋರಾಟದ ರೂಪುರೇಷೆ ನಿರ್ಧರಿಸಲಾಗುವುದು ಎಂದು ರೈತ ಮುಖಂಡರು ಸ್ಪಷ್ಟಪಡಿಸಿದ್ದಾರೆ.

Tags:

error: Content is protected !!