Belagavi

ಕಬ್ಬು ಬೆಳೆಗಾರರ ಆಕ್ರೋಶ: ಹೆದ್ದಾರಿ ತಡೆದು ರೈತರ ಬೃಹತ್ ಪ್ರತಿಭಟನೆ

Share

ಬೆಳಗಾವಿಯ ಸುವರ್ಣಸೌಧದ ಆವರಣದಲ್ಲಿ ಶುಕ್ರವಾರ ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಒಂದೆಡೆ ಮುಖ್ಯಮಂತ್ರಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸುತ್ತಿದ್ದರೆ, ಇನ್ನೊಂದೆಡೆ ನ್ಯಾಯಯುತ ಬೆಲೆಗೆ ಆಗ್ರಹಿಸಿ ಸಾವಿರಾರು ಕಬ್ಬು ಬೆಳೆಗಾರರು ರಾಷ್ಟ್ರೀಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ನಡೆಸಿದರು.

ಬೆಳಗಾವಿಯ ಸುವರ್ಣಸೌಧದ ಆವರಣದಲ್ಲಿ ಶುಕ್ರವಾರ ತೀವ್ರ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ಒಂದೆಡೆ ಮುಖ್ಯಮಂತ್ರಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಸಭೆ ನಡೆಸುತ್ತಿದ್ದರೆ, ಇನ್ನೊಂದೆಡೆ ನ್ಯಾಯಯುತ ಬೆಲೆಗೆ ಆಗ್ರಹಿಸಿ ಸಾವಿರಾರು ಕಬ್ಬು ಬೆಳೆಗಾರರು ರಾಷ್ಟ್ರೀಯ ಹೆದ್ದಾರಿ ತಡೆದು ಬೃಹತ್ ಪ್ರತಿಭಟನೆ ನಡೆಸಿದರು. ಸೌಧಕ್ಕೆ ಆಗಮಿಸುತ್ತಿದ್ದ ಶಾಸಕರ ಕಾರುಗಳಿಗೆ ಮುತ್ತಿಗೆ ಹಾಕಿ ಆಕ್ರೋಶ ವ್ಯಕ್ತಪಡಿಸಿದ ರೈತರು, ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ರಾಜ್ಯ ರೈತ ಸಂಘದ ರಾಜ್ಯಾಧ್ಯಕ್ಷ ಚೂನ್ನಪ್ಪ ಪೂಜಾರಿ ರಾಜ್ಯ ಸರ್ಕಾರವು ಪ್ರತಿ ಟನ್ ಕಬ್ಬಿಗೆ ಹೆಚ್ಚುವರಿಯಾಗಿ 1,000 ರೂಪಾಯಿ ಪ್ರೋತ್ಸಾಹ ಧನ ನೀಡಬೇಕು ಹಾಗೂ ತೂಕದ ಸೇತುವೆ ಮತ್ತು ಜಾಗ ಖರೀದಿಗಾಗಿ 500 ಕೋಟಿ ರೂಪಾಯಿ ನಿಧಿ ಮೀಸಲಿಡಬೇಕು ಎಂದು ಒತ್ತಾಯಿಸಿದರು. ಮುಖ್ಯಮಂತ್ರಿಗಳ ಸಭೆಯಲ್ಲಿ ಸರ್ಕಾರದಿಂದ ಸ್ಪಷ್ಟ ಘೋಷಣೆ ಹೊರಬಿದ್ದರೆ ಮಾತ್ರ ಹೋರಾಟ ಹಿಂಪಡೆಯುವುದಾಗಿ ಅವರು ಸ್ಪಷ್ಟಪಡಿಸಿದರು.ಸರ್ಕಾರದೊಂದಿಗಿನ ಸಭೆ ವಿಫಲವಾದರೆ ಅಥವಾ ಬೇಡಿಕೆಗಳು ಈಡೇರದಿದ್ದರೆ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸುವುದಾಗಿ ರೈತ ಮುಖಂಡರು ಎಚ್ಚರಿಸಿದ್ದಾರೆ. ನವೆಂಬರ್ 26 ರಂದು ಹುಬ್ಬಳ್ಳಿಯಲ್ಲಿ ಬೃಹತ್ ಚಳುವಳಿ ಹಮ್ಮಿಕೊಳ್ಳಲಾಗುವುದು ಮತ್ತು ಮುಂದಿನ ಹೋರಾಟವು ರೈತ ನಾಯಕರ ನಿಯಂತ್ರಣ ಮೀರಿ ರಾಜ್ಯವ್ಯಾಪಿ ಉಗ್ರ ಸ್ವರೂಪ ಪಡೆದುಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.

ಇದೇ ವೇಳೆ ಮಹಿಳಾ ಮುಖಂಡೆಯೊಬ್ಬರು ಮಾತನಾಡಿ, ಸರ್ಕಾರದ ಈ ಸಭೆ ಕೇವಲ ‘ಕಣ್ಣೊರೆಸುವ ತಂತ್ರ’ವಾಗಿದ್ದು, ಬರಗಾಲದ ಹಿನ್ನೆಲೆಯಲ್ಲಿ ತಮಿಳುನಾಡು ಮಾದರಿಯಲ್ಲಿ ಪ್ರೋತ್ಸಾಹ ಧನ ನೀಡಬೇಕು ಹಾಗೂ ಸ್ವಾಮಿನಾಥನ್ ವರದಿ ಆಧರಿಸಿ ಬೆಲೆ ನಿಗದಿಪಡಿಸಬೇಕು ಎಂದು ಸರ್ಕಾರಗಳನ್ನು ತೀವ್ರವಾಗಿ ತೊಳೆಯದರು.

ರೈತರ ದಿಢೀರ್ ಹೆದ್ದಾರಿ ತಡೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಿಲೋಮೀಟರ್‌ಗಟ್ಟಲೆ ವಾಹನಗಳು ಸಾಲುಗಟ್ಟಿ ನಿಂತು ಸಾರ್ವಜನಿಕರು ತೀವ್ರ ಪರದಾಡುವಂತಾಯಿತು. ಪರಿಸ್ಥಿತಿ ಕೈಮೀರುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ನಗರ ಪೊಲೀಸ್ ಆಯುಕ್ತ ಪ್ರಕಾಶ್ ನಿಕಮ್ ಹಾಗೂ ಉಪಾಯುಕ್ತ ಎನ್.ವಿ. ಬರಮನಿ ಅವರು ಪ್ರತಿಭಟನಾ ನಿರತ ರೈತರ ಮನವೊಲಿಸುವಲ್ಲಿ ಯಶಸ್ವಿಯಾದರು. ಬಳಿಕ ಹೆದ್ದಾರಿ ಸಂಚಾರವನ್ನು ಸುಗಮಗೊಳಿಸಿದ ರೈತರು, ಸುವರ್ಣಸೌಧದ ಮುಖ್ಯ ಗೇಟ್ ಎದುರು ಪ್ರತಿಭಟನೆಯನ್ನು ಮುಂದುವರಿಸಿದರು.

Tags:

error: Content is protected !!