Uncategorized

ಸಿದ್ದರಾಮಯ್ಯ, ಎಸ್.ಎಂ. ಕೃಷ್ಣ ಅವಧಿಯಲ್ಲೂ ಸೋಲಾಗಿತ್ತು…;ಸಚಿವ ಸತೀಶ್ ಜಾರಕಿಹೊಳಿ

Share

ವಿಧಾನಪರಿಷತ್ ಚುನಾವಣೆಯಲ್ಲಿನ ಫಲಿತಾಂಶಕ್ಕೆ ಮುಖ್ಯಮಂತ್ರಿ ಬದಲಾವಣೆ ಕುರಿತ ಚರ್ಚೆ ಅಥವಾ ಕಾಂಗ್ರೆಸ್ ನಾಯಕತ್ವದ ವೈಫಲ್ಯವೇ ಕಾರಣ ಎಂಬ ಅಭಿಪ್ರಾಯವನ್ನು ಸಚಿವರು ತಳ್ಳಿಹಾಕಿದರು. ಚುನಾವಣೆಯ ಸೋಲು-ಗೆಲುವನ್ನು ನಾಯಕತ್ವದ ವಿಚಾರಕ್ಕೆ ಮಾತ್ರ ಸೀಮಿತಗೊಳಿಸಿ ನೋಡುವುದು ಸರಿಯಲ್ಲ ಎಂದು ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಅವರು ಹಿಂದೆ ಸಿದ್ದರಾಮಯ್ಯ ಮತ್ತು ಎಸ್.ಎಂ. ಕೃಷ್ಣ ಮುಖ್ಯಮಂತ್ರಿಗಳಾಗಿದ್ದ ಸಂದರ್ಭಗಳಲ್ಲಿಯೂ ಕಾಂಗ್ರೆಸ್ ಪಕ್ಷವು ಈ ಕ್ಷೇತ್ರಗಳಲ್ಲಿ ಸೋಲು ಅನುಭವಿಸಿತ್ತು. ಆದ್ದರಿಂದ, ಈಗಿನ ಫಲಿತಾಂಶವನ್ನು ಮಾತ್ರ ಆಧರಿಸಿ ಕಾಂಗ್ರೆಸ್ ಸರ್ಕಾರದ ನಾಯಕತ್ವದ ಬಗ್ಗೆ ಪ್ರಶ್ನೆ ಎತ್ತುವುದು ಸಮಂಜಸವಲ್ಲ ಎಂಬ ಅಭಿಪ್ರಾಯವನ್ನು ಅವರು ವ್ಯಕ್ತಪಡಿಸಿದರು. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಂದಾಗಿ ಚುನಾವಣೆ ಎದುರಿಸುತ್ತಿರುವುದರಿಂದ ಅವುಗಳ ರಾಜಕೀಯ ಶಕ್ತಿ ಹೆಚ್ಚಾಗಿದೆ. ಪದವೀಧರರು ಹಾಗೂ ಶಿಕ್ಷಕರ ಕ್ಷೇತ್ರಗಳ ವಿಧಾನಪರಿಷತ್ ಚುನಾವಣೆಯ ಫಲಿತಾಂಶವನ್ನು ಕಾಂಗ್ರೆಸ್ ಪಕ್ಷದ ಹಿನ್ನಡೆ ಎಂದು ವ್ಯಾಖ್ಯಾನಿಸುವುದು ಸರಿಯಲ್ಲ ಎಂದರು.

ಪದವೀಧರ ಮತ್ತು ಶಿಕ್ಷಕರ ಕ್ಷೇತ್ರಗಳ ವಿಧಾನಪರಿಷತ್ ಚುನಾವಣೆಯ ಫಲಿತಾಂಶದ ಕುರಿತು ಪ್ರತಿಕ್ರಿಯಿಸಿದ ಅವರು, ಈ ಚುನಾವಣೆಯಲ್ಲಿ ಕಾಂಗ್ರೆಸ್ ಕಳೆದುಕೊಂಡಿರುವ ಸ್ಥಾನಗಳ ಕುರಿತು ವಾಸ್ತವಿಕವಾಗಿ ವಿಶ್ಲೇಷಣೆ ಮಾಡಬೇಕಿದೆ. ನಾಲ್ಕು ಕ್ಷೇತ್ರಗಳ ಪೈಕಿ ಈ ಹಿಂದೆ ಕಾಂಗ್ರೆಸ್ ಬಳಿ ಇದ್ದದ್ದು ಕೇವಲ ಒಂದು ಸ್ಥಾನ ಮಾತ್ರ. ಉಳಿದ ಮೂರು ಸ್ಥಾನಗಳು ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳ ಪಾಲಾಗಿದ್ದವು. ಇದೀಗ ಆ ಪಕ್ಷಗಳು ತಮ್ಮ ಹಿಂದಿನ ಸ್ಥಾನಗಳನ್ನು ಮರಳಿ ಪಡೆದುಕೊಂಡಿವೆ. ಹೀಗಿರುವಾಗ, ಈ ಫಲಿತಾಂಶವನ್ನು ಕಾಂಗ್ರೆಸ್‌ಗೆ ದೊಡ್ಡ ಹಿನ್ನಡೆ ಎಂದು ಬಿಂಬಿಸುವ ಅಗತ್ಯವಿಲ್ಲ ಎಂದು ಅಭಿಪ್ರಾಯಪಟ್ಟರು.

ಕಾಂಗ್ರೆಸ್‌ಗೆ ಈ ಫಲಿತಾಂಶದಿಂದ ಹಿನ್ನಡೆಯಾಗಿದೆ ಎಂಬ ವಿಶ್ಲೇಷಣೆಯನ್ನು ಒಪ್ಪದ ಸಚಿವರು, ಹಿಂದಿನ ಸ್ಥಾನಗಳ ಹಿನ್ನೆಲೆಯನ್ನು ಪರಿಗಣಿಸಬೇಕು ಎಂದು ಹೇಳಿದ್ದಾರೆ. ಅಲ್ಲದೆ, ಹಿಂದಿನ ಮುಖ್ಯಮಂತ್ರಿಗಳ ಅವಧಿಯಲ್ಲಿಯೂ ಇಂತಹ ಸೋಲುಗಳು ಸಂಭವಿಸಿದ್ದನ್ನು ನೆನಪಿಸುವ ಮೂಲಕ, ಚುನಾವಣಾ ಫಲಿತಾಂಶವೊಂದನ್ನೇ ಆಧರಿಸಿ ನಾಯಕತ್ವದ ಬಗ್ಗೆ ತೀರ್ಮಾನಿಸುವುದು ಸರಿಯಲ್ಲ ಎಂಬ ನಿಲುವು ವ್ಯಕ್ತಪಡಿಸಿದ್ದಾರೆ.

Tags:

error: Content is protected !!