ಚನ್ನಮ್ಮನ ಕಿತ್ತೂರು ತಾಲೂಕಿನಲ್ಲಿ ಸಂಭವಿಸಿದ ಭೀಕರ ರಸ್ತೆ ಅಪಘಾತವೊಂದರಲ್ಲಿ ಬೈಕ್ ಸವಾರ ದಂಪತಿ ಸೇರಿದಂತೆ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
ಚನ್ನಮ್ಮನ ಕಿತ್ತೂರು ತಾಲೂಕಿನ ದೇಮಟ್ಟಿ-ಮಲ್ಲಾಪುರ ಮಾರ್ಗದಲ್ಲಿ ಸೋಮವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಬೈಕ್‌ನಲ್ಲಿದ್ದ ಅಜಾದ್ ಇಸ್ಮಾಯಿಲ್ ಜಮಾದಾರ (45), ಅವರ ಪತ್ನಿ ಕೈರೂನ್ ಆಜಾದ್ ಜಮಾದಾರ (40) ಹಾಗೂ ಅಳಿಯ ಬಾಬಾಜಾನ್ ನಿಸ್ಸಾರಅಹ್ಮದ್ ತಡಕೋಡ (16) ಸ್ಥಳದಲ್ಲೇ ಮೃತಪಟ್ಟಿದ್ದಾರೆ. ದೇಮಟ್ಟಿಯಿಂದ ಕಿತ್ತೂರಿಗೆ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಟಾಟಾ ಎಸ್ ವಾಹನ ಹಾಗೂ ಬೈಕ್ ನಡುವೆ ಮುಖಮುಖಿ ಡಿಕ್ಕಿ ಸಂಭವಿಸಿದ್ದು, ಈ ದುರ್ಘಟನೆಗೆ ಕಾರಣವಾಗಿದೆ. ಈ ಕುರಿತು ಕಿತ್ತೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.
