Belagavi

ಬೆಳಗಾವಿ: ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಎಸ್.ಸಿ/ಎಸ್.ಟಿ ಮಾಸಿಕ ಕುಂದುಕೊರತೆ ಸಭೆ

Share

ಬೆಳಗಾವಿ ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸಮುದಾಯದ ಮಾಸಿಕ ಕುಂದುಕೊರತೆಗಳ ಸಭೆಯನ್ನು ಆಯೋಜಿಸಲಾಗಿತ್ತು. ಪೊಲೀಸ್ ಆಯುಕ್ತರ ಅಧ್ಯಕ್ಷತೆಯಲ್ಲಿ ನಡೆದ ಈ ಸಭೆಯಲ್ಲಿ ಸಾರ್ವಜನಿಕರ ಹತ್ತಾರು ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಸೂಚಿಸಲಾಯಿತು.

ಬೆಳಗಾವಿ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಪೊಲೀಸ್ ಆಯುಕ್ತರ ಅಧ್ಯಕ್ಷತೆಯಲ್ಲಿ ಎಸ್.ಸಿ/ಎಸ್.ಟಿ ಮಾಸಿಕ ಕುಂದುಕೊರತೆಗಳ ಸಭೆ ಯಶಸ್ವಿಯಾಗಿ ಜರುಗಿತು. ಸಭೆಯಲ್ಲಿ ಸುಮಾರು 100 ರಿಂದ 120 ಮುಖಂಡರು ಹಾಗೂ ಸದಸ್ಯರು ಭಾಗವಹಿಸಿ, ತಮ್ಮ ಸಮಸ್ಯೆ ಹಾಗೂ ದೂರುಗಳನ್ನು ಆಯುಕ್ತರ ಮುಂದೆ ಸುದೀರ್ಘವಾಗಿ ಮಂಡಿಸಿದರು. ಸಾರ್ವಜನಿಕರ ಅಹವಾಲುಗಳನ್ನು ಆಲಿಸಿದ ಆಯುಕ್ತರು, ಪೊಲೀಸ್ ಇಲಾಖೆಗೆ ಸಂಬಂಧಿಸಿದ ದೂರುಗಳನ್ನು ಆದ್ಯತೆಯ ಮೇರೆಗೆ ತಕ್ಷಣವೇ ಬಗೆಹರಿಸುವಂತೆ ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು. ಇನ್ನುಳಿದಂತೆ ಇತರ ಸರ್ಕಾರಿ ಇಲಾಖೆಗಳಿಗೆ ಸಂಬಂಧಿಸಿದ ವಿಷಯಗಳನ್ನು ಆಯಾ ಇಲಾಖೆಯ ಮೇಲಧಿಕಾರಿಗಳಿಗೆ ಪತ್ರದ ಮೂಲಕ ರವಾನಿಸಿ ಕ್ರಮ ಕೈಗೊಳ್ಳಲು ನಿರ್ಧರಿಸಲಾಯಿತು. ಈ ಸಭೆಯಲ್ಲಿ ಕಾಯ್ದೆ ಮತ್ತು ಸುವ್ಯವಸ್ಥೆ ಹಾಗೂ ಅಪರಾಧ ಮತ್ತು ಸಂಚಾರ ವಿಭಾಗದ ಡಿಸಿಪಿಗಳು, ಎಲ್ಲಾ ಎಸಿಪಿಗಳು, ಪಿಐಗಳು ಸೇರಿದಂತೆ ಡಿ.ಸಿ.ಆರ್.ಇ, ಕಂದಾಯ, ಮಹಾನಗರ ಪಾಲಿಕೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.

Tags:

error: Content is protected !!