ಕರ್ನಾಟಕ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆಯ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ (NTCP) ವತಿಯಿಂದ, ಬೆಳಗಾವಿ ವಿಭಾಗದ ವ್ಯಾಪ್ತಿಯಲ್ಲಿ ತಂಬಾಕು ಮುಕ್ತ ಗ್ರಾಮಗಳ ನಿರ್ಮಾಣ ಹಾಗೂ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಅಧಿಕಾರಿಗಳಿಗೆ ಅರಿವು ಮೂಡಿಸುವ ಉದ್ದೇಶದಿಂದ ಇಂದು ಬೆಳಗಾವಿಯ ಜಿಲ್ಲಾ ಪಶು ಪಾಲನ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಕಚೇರಿ ಸಭಾಂಗಣದಲ್ಲಿ ವಿಭಾಗ ಮಟ್ಟದ ಜಾಗೃತಿ ಕಾರ್ಯಾಗಾರವನ್ನು ಆಯೋಜಿಸಲಾಯಿತು.
ಹೆಚ್ಚುವರಿ ನಿರ್ದೇಶಕರು ಬೆಳಗಾವಿ ವಿಭಾಗ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆ ಕರ್ನಾಟಕ ಸರ್ಕಾರ ಡಾ. ಸುಜಾತ ವಿ. ಹಸುವಿಮಠ ಪ್ರಾಸ್ತಾವಿಕವಾಗಿ ಮಾತನಾಡುತ್ತಾ ತಂಬಾಕು ಸೇವನೆಯಿಂದ ಉಂಟಾಗುವ ಆರೋಗ್ಯ ಸಮಸ್ಯೆಗಳನ್ನು ತಡೆಗಟ್ಟುವುದು, ಗ್ರಾಮೀಣ ಪ್ರದೇಶಗಳಲ್ಲಿ ತಂಬಾಕು ಬಳಕೆಯನ್ನು ಕಡಿಮೆ ಮಾಡುವುದು ಮತ್ತು ಆರೋಗ್ಯಕರ ಸಮಾಜ ನಿರ್ಮಿಸುವುದು ಈ ಕಾರ್ಯಾಗಾರದ ಪ್ರಮುಖ ಉದ್ದೇಶವಾಗಿದೆ. ತಂಬಾಕು ಮುಕ್ತ ಗ್ರಾಮಗಳ ಪ್ರಮಾಣಿತ ಕಾರ್ಯಾಚರಣಾ ವಿಧಾನವನ್ನು (Standard Operating Procedure – SoP) ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವ ಕುರಿತು ಅಧಿಕಾರಿಗಳಿಗೆ ಮಾರ್ಗದರ್ಶನ ನೀಡಲಾಗುತ್ತದೆ ಎಂದು ಕಾರ್ಯಾಗಾರದಲ್ಲಿ ಮಾತನಾಡಿದರು.

ವಿಭಾಗಿಯ ಜಂಟಿ ನಿರ್ದೇಶಕರು,ಬೆಳಗಾವಿ ವಿಭಾಗ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಇಲಾಖೆ ಕರ್ನಾಟಕ ಸರ್ಕಾರ ಡಾ. ಪುಷ್ಪ ಎಚ್ ಆರ್ ಇವರು ಕಾರ್ಯಕ್ರಮವನ್ನು ಉದ್ಘಾಟಿಸಿ ಭಾರತದಲ್ಲಿ 27 ಕೋಟಿಗೂ ಹೆಚ್ಚು ಜನರು ತಂಬಾಕು ಉತ್ಪನ್ನಗಳನ್ನು ಬಳಸುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಲ್ಲಿ ತಂಬಾಕು ಬಳಕೆಯ ಪ್ರಮಾಣವೂ ಹೆಚ್ಚಿರುವುದರಿಂದ, ಗ್ರಾಮ ಮಟ್ಟದಲ್ಲಿಯೇ ಸಮುದಾಯದ ಸಹಭಾಗಿತ್ವದೊಂದಿಗೆ ಪರಿಣಾಮಕಾರಿ ತಂಬಾಕು ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುವುದು ಅತ್ಯಂತ ಅಗತ್ಯವಾಗಿದೆ ಎಂದು ಕಾರ್ಯಾಗಾರದಲ್ಲಿ ಮಾತನಾಡಿದರು.
ಸಹಾಯಕ ಪ್ರಾಧ್ಯಾಪಕರು ಉಸಿರಾಟ ಔಷದಿ ವಿಭಾಗ ವೈದ್ಯಕೀಯ ಕಾಲೇಜು, ಬೆಳಗಾವಿ ಡಾ. ಗೌತಮ್ ಎಸ್ ಇವರು ತಂಬಾಕು ಸೇವನೆ ಆರೋಗ್ಯಕ್ಕೆ ಹಾನಿಕಾರಕ!
ತಂಬಾಕು ಸೇವನೆಯು ಮಾನವನ ಆರೋಗ್ಯದ ಮೇಲೆ ಗಂಭೀರ ಪರಿಣಾಮಗಳನ್ನು ಉಂಟುಮಾಡುತ್ತದೆ. ಸಿಗರೇಟ್, ಬೀಡಿ, ಗುಟ್ಕಾ, ಪಾನ್ ಮಸಾಲಾ ಹಾಗೂ ಜಗಿಯುವ ತಂಬಾಕು ಉತ್ಪನ್ನಗಳ ಸೇವನೆಯಿಂದ ಅನೇಕ ಮಾರಕ ಕಾಯಿಲೆಗಳು ಉಂಟಾಗಬಹುದು.ಕ್ಯಾನ್ಸರ್ ರೋಗಗಳು
ಹೃದಯ ಸಂಬಂಧಿ ಕಾಯಿಲೆಗಳು ಶ್ವಾಸಕೋಶದ ಕಾಯಿಲೆಗಳು ಬಾಯಿ ಮತ್ತು ಹಲ್ಲುಗಳ ಸಮಸ್ಯೆಗಳು, ಮಾನಸಿಕ ಮತ್ತು ಆರ್ಥಿಕ ಪರಿಣಾಮಗಳು, ಕುಟುಂಬ ಮತ್ತು ಸಮಾಜದ ಮೇಲೆ ಪರಿಣಾಮಗಳು, ಮಕ್ಕಳು ಮತ್ತು ಯುವಜನರನ್ನು ತಂಬಾಕಿನಿಂದ ದೂರವಿಡಿ
ತಂಬಾಕು ಮುಕ್ತ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ ಎಂದು ಮಾತನಾಡಿದರು.
ವಿಭಾಗೀಯ ಸಂಯೋಜಕರು ರಾಜ್ಯ ತಂಬಾಕು ನಿಯಂತ್ರಣ ಘಟಕ ಬೆಂಗಳೂರು ಶ್ರೀಯುತ ಮಹಾಂತೇಶ್ ಉಳ್ಳಾಗಡ್ಡಿ ಇವರು ಗ್ರಾಮ ಪಂಚಾಯಿತಿಗಳು, ಆರೋಗ್ಯ ಇಲಾಖೆ ಹಾಗೂ ಸಂಬಂಧಿತ ಇಲಾಖೆಗಳ ಸಮನ್ವಯದೊಂದಿಗೆ ತಂಬಾಕು ಮುಕ್ತ ಗ್ರಾಮಗಳನ್ನು ರೂಪಿಸುವುದು, ತಂಬಾಕು ಬಳಕೆಯ ದುಷ್ಪರಿಣಾಮಗಳ ಕುರಿತು ಜನಜಾಗೃತಿ ಮೂಡಿಸುವುದು ಮತ್ತು ತಂಬಾಕು ತ್ಯಜಿಸಲು ಬಯಸುವವರಿಗೆ ಸೂಕ್ತ ನೆರವು ದೊರೆಯುವಂತೆ ಮಾಡುವುದು ಈ ಉಪಕ್ರಮದ ಪ್ರಮುಖ ಆಶಯಗಳಾಗಿವೆ ಎಂದು ಮಾತನಾಡಿದರು.
ವಿಭಾಗಿಯ ಸಂಯೋಜಕರು ರಾಜ್ಯ ತಂಬಾಕು ನಿಯಂತ್ರಣ ಘಟಕ ಬೆಂಗಳೂರು ಶ್ರೀಯುತ ತೀರ್ಥೇಶ ಇವರು ಕಾರ್ಯಾಗಾರದಲ್ಲಿ ರಾಷ್ಟ್ರೀಯ ತಂಬಾಕು ನಿಯಂತ್ರಣ ಕಾರ್ಯಕ್ರಮದ ಉದ್ದೇಶಗಳು, ರಚನೆ ಹಾಗೂ ಕರ್ನಾಟಕದಲ್ಲಿ ಕಾರ್ಯಕ್ರಮದ ಪ್ರಗತಿ ಕುರಿತು ಮಾಹಿತಿ ನೀಡಲಾಗುತ್ತದೆ. ಜೊತೆಗೆ, ತಂಬಾಕು ಮುಕ್ತ ಗ್ರಾಮಗಳ ಘೋಷಣೆಗೆ ಅನುಸರಿಸಬೇಕಾದ ಹಂತಗಳು ಮತ್ತು ಪ್ರಮಾಣಿತ ಕಾರ್ಯಾಚರಣಾ ವಿಧಾನಗಳ ಕುರಿತು ತಾಂತ್ರಿಕ ಮಾರ್ಗದರ್ಶನ ನೀಡಲಾಗುತ್ತದೆ ಬೆಳಗಾವಿ, ಉತ್ತರ ಕನ್ನಡ, ಧಾರವಾಡ ಮತ್ತು ಹಾವೇರಿ ಜಿಲ್ಲೆಗಳಲ್ಲಿ ತಂಬಾಕು ಮುಕ್ತ ಗ್ರಾಮಗಳ ಘೋಷಣೆಗೆ ಸಂಬಂಧಿಸಿದ ಅನುಭವಗಳನ್ನು ಹಂಚಿಕೊಳ್ಳುವ ಮೂಲಕ, ಇತರ ಜಿಲ್ಲೆಗಳಲ್ಲಿಯೂ ಈ ಉಪಕ್ರಮವನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಅಗತ್ಯವಾದ ಪ್ರಾಯೋಗಿಕ ತಿಳುವಳಿಕೆಯನ್ನು ಬೆಳೆಸಲಾಗುತ್ತದೆ ಎಂದು ಮಾತನಾಡಿದರು.
ಈ ಕಾರ್ಯಾಗಾರದಲ್ಲಿ ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಆರೋಗ್ಯ ಇಲಾಖೆ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ಕಾರ್ಯಕ್ರಮವನ್ನು ಮಾಂತೇಶ ಉಳ್ಳಾಗಡ್ಡಿ ವಿಭಾಗಿಯ ಸಂಯೋಜಕರು ರಾಜ್ಯ ತಂಬಾಕು ನಿಯಂತ್ರಣ ಕೋಶ ಬೆಂಗಳೂರು ಇವರು ಕಾರ್ಯಕ್ರಮವನ್ನು ನಿರೂಪಿಸಿ ವಂದಿಸಿದರು.
