Chikkodi

ಕಾನೂನು ಸುವ್ಯವಸ್ಥೆ ಕಾಪಾಡಲು ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್: ಎಸ್‌ಪಿ ಕೆ. ರಾಮರಾಜನ್

Share

ರಾಜ್ಯದ ವಿವಿಧ ಭಾಗಗಳಲ್ಲಿ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನಡೆಯುತ್ತಿರುವ ಬಂದ್ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಿಲ್ಲೆಯಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಳ್ಳಲಾಗಿದೆ ಎಂದು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ. ರಾಮರಾಜನ್ ತಿಳಿಸಿದ್ದಾರೆ.

​ಚಿಕ್ಕೋಡಿಯಲ್ಲಿ ರೈತರ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮಾಧ್ಯಮಗಳ ಜೊತಗೆ ಮಾತನಾಡಿ ಎಸ್‌ಪಿ, ಸಾರ್ವಜನಿಕರಿಗೆ ಹಾಗೂ ರೈತರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಗಸ್ತು ಭದ್ರತೆಯನ್ನು ತೀವ್ರಗೊಳಿಸಲಾಗಿದೆ ಎಂದರು.
ರಾಷ್ಟ್ರೀಯ ಹೆದ್ದಾರಿ ಬಂದ್ ಮಾಡುವುದರಿಂದ ಉದ್ಯಮಿಗಳು, ಸಾರಿಗೆ ಸಂಸ್ಥೆಗಳು ಹಾಗೂ ತುರ್ತು ಸೇವೆಗಳಿಗಾಗಿ ಪ್ರಯಾಣಿಸುವ ಸಾರ್ವಜನಿಕರಿಗೆ ತೀವ್ರ ತೊಂದರೆಯಾಗುತ್ತದೆ ಎಂದು ಎಸ್‌ಪಿ ಕಳವಳ ವ್ಯಕ್ತಪಡಿಸಿದರು.

ಬೆಳಗಾವಿ ಬಸ್ ನಿಲ್ದಾಣದ ಬಳಿ ನಡೆದ ಘಟನೆಯು ನಗರ ಹಾಗೂ ಜಿಲ್ಲಾ ಪೊಲೀಸ್ ವ್ಯಾಪ್ತಿಗೆ ಸಂಬಂಧಿಸಿದೆ ಎಂದು ಅವರು ಸ್ಪಷ್ಟನೆ ನೀಡಿದರು.
ನಾಳೆ (ನವೆಂಬರ್ 1) ರೈತ ಸಂಘಟನೆಗಳು ಬಂದ್‌ಗೆ ಕರೆ ನೀಡಿರುವ ವರದಿಗಳ ನಡುವೆ, ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳು ಕನ್ನಡ ರಾಜ್ಯೋತ್ಸವವನ್ನು ಯಾವುದೇ ಗೊಂದಲಗಳಿಲ್ಲದೆ ಅತ್ಯಂತ ಅದ್ದೂರಿ ಮತ್ತು ಉತ್ಸಾಹದಿಂದ ಆಚರಿಸಬೇಕಾಗಿ ಎಸ್‌ಪಿ ಮನವಿ ಮಾಡಿದರು. ಜಿಲ್ಲೆಯಲ್ಲಿ ಶಾಂತಿ ಮತ್ತು ಕೋಮು ಸೌಹಾರ್ದತೆ ಕಾಪಾಡಲು ಪೊಲೀಸ್ ಇಲಾಖೆ ಸಂಪೂರ್ಣ ಸಜ್ಜಾಗಿದೆ ಎಂದು ಅವರು ಭರವಸೆ ನೀಡಿದ್ದಾರೆ.

Tags:

error: Content is protected !!