ವಿಜಯಪುರ ಜಿಲ್ಲೆಯ ಬಬಲೇಶ್ವರ ತಾಲ್ಲೂಕಿನ ಸಂಗಾಪುರ ಗ್ರಾಮದಲ್ಲಿ ಕಬ್ಬು ಬೆಳೆಗಾರರು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ ಅವರಿಗೆ ಘೇರಾವ್ ಹಾಕಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ರೈತರು ಮತ್ತು ಸಚಿವರ ನಡುವೆ ತೀವ್ರ ವಾಗ್ವಾದ ನಡೆಯಿತು.
ಕಬ್ಬಿಗೆ ಸೂಕ್ತ ಬೆಲೆ ನಿಗದಿಪಡಿ ಸುವಂತೆ ಆಗ್ರಹಿಸಿ ರೈತರು ಸಚಿವರನ್ನು ತರಾಟೆಗೆ ತೆಗೆದುಕೊಂಡರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಎಂ.ಬಿ.ಪಾಟೀಲ, ‘ನಾನು ನಿಮ್ಮ ಭೂಮಿಗೆ ನೀರು ಕೊಟ್ಟಿರು ವುದರಿಂದಲೇ ಇಂದು ನೀವು ಕಬ್ಬು ಬೆಳೆದಿದ್ದೀರಿ ಎಂಬುದನ್ನು ಮರೆಯಬೇಡಿ’ ಎಂದು ಹೇಳಿದರು.
ರಾಜ್ಯ ಸರ್ಕಾರ ಕಬ್ಬು ಬೆಳೆಗಾರರ ಪರವಾಗಿದ್ದು, ರೈತರ ಬೇಡಿಕೆಗಳಿಗೆ ಸ್ಪಂದಿಸಲಿದೆ. ಹೀಗಾಗಿ ತಾಳ್ಮೆ ವಹಿಸುವಂತೆ ಸಚಿವರು ಮನವಿ ಮಾಡಿದರು. ಆದರೆ, ರೈತರು ತಮ್ಮ ಪಟ್ಟು ಸಡಿಲಿಸದೆ ಆಕ್ರೋಶ ವ್ಯಕ್ತಪಡಿಸಿದರು. ಪರಿಸ್ಥಿತಿ ಉದ್ವಿಗ್ನಗೊಂಡ ಹಿನ್ನೆಲೆಯಲ್ಲಿ ಪೊಲೀಸರು ಲಾಠಿ ಬೀಸಿ ಪ್ರತಿಭಟನಾಕಾರರನ್ನು ಚದುರಿಸಿದರು.
