ಚುನಾವಣಾ ಅಕ್ರಮಗಳ ಆರೋಪದ ಹಿನ್ನೆಲೆಯಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಹಾಗೂ ‘ಇಂಡಿಯಾ’ ಒಕ್ಕೂಟದ ನಾಯಕರು ಇಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸುತ್ತಿದ್ದಾರೆ. ರಾಹುಲ್ ಗಾಂಧಿ ಅವರ ಕರೆಯ ಮೇರೆಗೆ ದೇಶಾದ್ಯಂತ ಸಾವಿರಾರು ಕಾರ್ಯಕರ್ತರು ದೆಹಲಿಗೆ ಹರಿದು ಬಂದಿದ್ದು, ಬೆಳಗಾವಿಯ ಪ್ರಮುಖ ನಾಯಕರು ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ಧಾರೆ.

ಚುನಾವಣಾ ಅಕ್ರಮ ಹಾಗೂ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆಯಲ್ಲಿ (SIR) ನಡೆದಿದೆ ಎನ್ನಲಾದ ಗೋಲ್ ಮಾಲ್ ಖಂಡಿಸಿ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ಕಾಂಗ್ರೆಸ್ ಮತ್ತು ‘ಇಂಡಿಯಾ’ ಒಕ್ಕೂಟದ ನಾಯಕರು ಇಂದು ದೆಹಲಿಯ ಐತಿಹಾಸಿಕ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದರು. ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಕರೆಯ ಮೇರೆಗೆ ದೇಶದ ವಿವಿಧ ಭಾಗಗಳಿಂದ ಲಕ್ಷಾಂತರ ಕಾರ್ಯಕರ್ತರು ದೆಹಲಿಗೆ ಆಗಮಿಸಿದ್ದು, ಕರ್ನಾಟಕದ ಬೆಳಗಾವಿ ಜಿಲ್ಲೆಯಿಂದ ಕಾಂಗ್ರೆಸ್ ಕಾರ್ಯಕರ್ತರಾದ ಪರಶುರಾಮ ವಗ್ಗೆನ್ನವರ, ಮೇತ್ರಿ ಹಾಗೂ ಗಜಾನನ ಧರನಾಯಕ ಅವರ ನೂರಾರು ಕಾರ್ಯಕರ್ತರು ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದರು.

