ಬಾಗಲಕೋಟೆಯ ನವನಗರದ ಜಿಲ್ಲಾ ಕ್ರೀಡಾಂಗಣದಲ್ಲಿ 71ನೇ ಕನ್ನಡ ರಾಜ್ಯೋತ್ಸವ ಸಮಾರಂಭ ಅದ್ದೂರಿಯಾಗಿ ನಡೆಯಿತು.

ಜಿಲ್ಲಾ ಉಸ್ತುವಾರಿ ಹಾಗೂ ಸಣ್ಣ ಕೈಗಾರಿಕಾ ಸಚಿವ ವಿಜಯಾನಂದ ಕಾಶಪ್ಪನವರ ಧ್ವಜಾರೋಹಣ ನೆರವೇರಿಸಿ, ಕನ್ನಡಾಂಬೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿದರು.
ಬಳಿಕ ಮಾತನಾಡಿದ ಅವರು, ರಾಜ್ಯದಲ್ಲಿ ಪ್ರಜಾ ಆಂದೋಲನ ಸೇವೆಗೆ ಚಾಲನೆ ನೀಡುವ ಮೂಲಕ ಜನರ ಸಮಸ್ಯೆಗಳಿಗೆ ಹೆಚ್ಚಿನ ಒತ್ತು ನೀಡಲಾಗಿದ್ದು, ವಿವಿಧ ಕ್ಷೇತ್ರಗಳಲ್ಲಿ ಸಾಕಷ್ಟು ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

ಇದಕ್ಕೂ ಮುನ್ನ ಆಕರ್ಷಕ ಪಥಸಂಚಲನ ನಡೆಯಿತು. ಶಾಲಾ ಮಕ್ಕಳಿಂದ ನಡೆದ ಸಾಂಸ್ಕೃತಿಕ ಕಾರ್ಯಕ್ರಮಗಳು ಗಮನ ಸೆಳೆದವು. ಬಳಿಕ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಸಾಧಕರನ್ನು ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಸಂಸದ ಪಿ.ಸಿ. ಗದ್ದಿಗೌಡರ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಶಾಸಕ ಉಮೇಶ ಮೇಟಿ, ಜಿಲ್ಲಾಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಗಣ್ಯರು ಉಪಸ್ಥಿತರಿದ್ದರು.
