Dharwad

ನವಲಗುಂದದ ಗುಮ್ಮಗೋಳದಲ್ಲಿ ಕನ್ನಡ ರಾಜ್ಯೋತ್ಸವ ಸಂಭ್ರಮ: ಜ್ಞಾನಪೀಠ ಪ್ರಶಸ್ತಿ ವಿಜೇತ ಸಾಹಿತಿಗಳ ಮೂರ್ತಿ ಪ್ರತಿಷ್ಠಾಪನೆ

Share

ಇಂದು ಎಲ್ಲೆಡೆ ಕನ್ನಡ ರಾಜ್ಯೋತ್ಸವದ ಸಂಭ್ರಮ ಜೋರಾಗಿದ್ದು, ಗಲ್ಲಿ ಗಲ್ಲಿಗಳಲ್ಲಿ ಕನ್ನಡ ಅಭಿಮಾನಿಗಳ ಕೆಂಪು-ಹಳದಿ ಬಾವುಟಗಳು ರಾರಾಜಿಸುತ್ತಿವೆ. ಆದರೆ ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ಗುಮ್ಮಗೋಳ ಗ್ರಾಮದಲ್ಲಿ ಕನ್ನಡ ರಾಜ್ಯೋತ್ಸವದ ಹಿನ್ನೆಲೆಯಲ್ಲಿ ಕನ್ನಡಕ್ಕೆ ಗೌರವ ತಂದುಕೊಟ್ಟ ಮಹನೀಯರ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡುವುದರ ಮೂಲಕ ಅರ್ಥಪೂರ್ಣವಾಗಿ ರಾಜ್ಯೋತ್ಸವವನ್ನು ಆಚರಣೆ ಮಾಡಿದ್ದಾರೆ.

ಹೌದು, ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಗುಮ್ಮಗೋಳದಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ ಮುಗಿಲು ಮುಟ್ಟಿತ್ತು. ಗ್ರಾಮಸ್ಥರೆಲ್ಲರೂ ಒಟ್ಟಾಗಿ ಸೇರಿಕೊಂಡು ಕನ್ನಡ ಭಾಷೆಗೆ ಗೌರವ ತಂದುಕೊಟ್ಟ ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಕನ್ನಡ ಸಾಹಿತಿಗಳ ಮೂರ್ತಿಗಳನ್ನು ಕುಂಭಮೇಳ ಹಾಗೂ ಹೆಜ್ಜೆ ಮೇಳ ತಂಡಗಳ ಭವ್ಯ ಮೆರವಣಿಗೆಯ ಮೂಲಕ ತಂದು ಪ್ರತಿಷ್ಠಾಪನೆ ಮಾಡಿದರು.

ಈ ಸಂದರ್ಭದಲ್ಲಿ ಪುಟಾಣಿ ಮಕ್ಕಳು ವಿವಿಧ ವೇಷಭೂಷಣಗಳನ್ನು ತೊಟ್ಟು ಎಲ್ಲರ ಗಮನ ಸೆಳೆದರು. ಗ್ರಾಮದಾದ್ಯಂತ ಭವ್ಯ ಮೆರವಣಿಗೆ ನಡೆಸಿ ಕನ್ನಡದ ಕಂಪನ್ನು ಹರಡಲಾಯಿತು. ಈ ಕಾರ್ಯಕ್ರಮಕ್ಕೆ ಕನ್ನಡಪರ ಸಂಘಟನೆಗಳ ಯುವಕರು ಹಾಗೂ ಊರಿನ ಗುರುಹಿರಿಯರು ಸಾಥ್ ನೀಡಿದ್ದು, ಶಾಲಾ ಎಸ್‌ಡಿಎಂಸಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಸಕ್ರಿಯವಾಗಿ ಭಾಗವಹಿಸಿದ್ದರು.

Tags:

error: Content is protected !!