ಬೆಳಗಾವಿಯ ಸಂತ ಮೀರಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026ರ ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮದಿಂದ ಆಚರಿಸಲಾಯಿತು. ನಾಡಗೀತೆ, ಆಕರ್ಷಕ ನೃತ್ಯ ಹಾಗೂ ಛದ್ಮವೇಷ ಪ್ರದರ್ಶನದೊಂದಿಗೆ ಕನ್ನಡ ಡಿಂಡಿಮ ಮೊಳಗಿದೆ.
ಬೆಳಗಾವಿಯ ಅನಗೋಳದಲ್ಲಿರುವ ಸಂತ ಮೀರಾ ಆಂಗ್ಲ ಮಾಧ್ಯಮ ಶಾಲೆಯಲ್ಲಿ 2026ರ ನವೆಂಬರ್ 1ರಂದು ಕರ್ನಾಟಕ ರಾಜ್ಯೋತ್ಸವವನ್ನು ಅತ್ಯಂತ ಸಂಭ್ರಮ ಮತ್ತು ವಿಜೃಂಭಣೆಯಿಂದ ಆಚರಿಸಲಾಯಿತು. ಶಾಲೆಯ ಮುಖ್ಯೋಪಾಧ್ಯಾಯಿನಿರಾದ ಶ್ರೀಮತಿ ಸುಜಾತ ಧಪ್ತರ್ದಾರ ಹಾಗೂ ಸಹ ಮುಖ್ಯೋಪಾಧ್ಯಾಯಿನಿರಾದ ರುತುಜಾ ಜಾಧವ ಅವರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ನಂತರ ವಿದ್ಯಾರ್ಥಿಗಳು ಒಟ್ಟಾಗಿ ನಾಡಗೀತೆಯನ್ನು ಹಾಡಿ ಕರ್ನಾಟಕ ಮಾತೆಗೆ ಗೌರವ ನಮನ ಸಲ್ಲಿಸಿದರು. ಈ ವೇಳೆ ವಿದ್ಯಾರ್ಥಿಗಳು ಕರ್ನಾಟಕದ ಇತಿಹಾಸ, ಸಂಸ್ಕೃತಿ ಮತ್ತು ಕನ್ನಡ ಭಾಷೆಯ ವೈಶಿಷ್ಟ್ಯತೆಯ ಕುರಿತು ಭಾಷಣ ಮಾಡಿದರು.
ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳಿಂದ ಸುಮಧುರ ಗಾಯನ, ಮನಮೋಹಕ ನೃತ್ಯ ಹಾಗೂ ಕರ್ನಾಟಕದ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಆಕರ್ಷಕ ಛದ್ಮವೇಷ ಪ್ರದರ್ಶನ ಎಲ್ಲರ ಗಮನ ಸೆಳೆಯಿತು. ಪ್ರಾಂಶುಪಾಲರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿ, ಕನ್ನಡ ಭಾಷೆ ಹಾಗೂ ನಾಡಿನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿಯ ಕುರಿತು ಅಮೂಲ್ಯ ಸಂದೇಶ ನೀಡಿದರು. ಅಂತಿಮವಾಗಿ ಶಾಂತಿ ಮಂತ್ರದೊಂದಿಗೆ ಕಾರ್ಯಕ್ರಮವು ಯಶಸ್ವಿಯಾಗಿ ಮುಕ್ತಾಯಗೊಂಡಿತು.
